Saturday, May 4, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಭೀಕರ ಹತ್ಯೆ..! ಎರಡು ದಿನಗಳ ಕಾಲ ದ.ಕ ಜಿಲ್ಲೆಯ ಹಲವು ಕಡೆ ಮದ್ಯ ಮಾರಾಟ ನಿಷೇಧ

- Advertisement -G L Acharya panikkar
- Advertisement -

ಪುತ್ತೂರು: ಪ್ರವೀಣ್ ಹತ್ಯೆ ಹಿನ್ನೆಲೆ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ಮತ್ತು ಜು.29 ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.

ಜು.28 ಮತ್ತು ಜು.29 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಎಲ್ಲಾ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ. ರವರು ಆದೇಶ ನೀಡಿದ್ದಾರೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಪುಕ್ಷುಬ್ಧವಾಗಿದ್ದು, ಸದ್ರಿ ಪಕ್ಷುಬ್ಧ ವಾತಾವರಣವು ಇತರ ಸ್ಥಳಗಳಿಗೂ ಪುಸಹರಿಸುವ ಸಾಧ್ಯತೆಗಳಿದ್ದು, ಈ ಸಮಯದಲ್ಲಿ ಮದ್ಯಪಾನ ವಗೈರೆ ಮಾಡುವ ಮೂಲಕ ಸಾರ್ವಜನಿಕ ಶಾಂತಿ ಭಂಗ ಮತ್ತು ಕಾನೂನು ಸುವ್ಯವಸ್ಥೆಗೆ ತೊಡಕುಂಟು ಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದಾರೆ.

ಅದೇ ರೀತಿ ಪ್ರತಿಯೊಂದು ತಾಲೂಕಿನ ಬಾರ್ ಮತ್ತು ವೈನ್ ಶಾಪ್ ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೋಹರು (ಸೀಲ್)ಗಳನ್ನು ಕಡ್ಡಾಯವಾಗಿ ಮಾಡುವಂತೆ ವ್ಯವಸ್ಥೆಗೊಳಿಸಲು ತಿಳಿಸಿದ್ದಾರೆ.

- Advertisement -

Related news

error: Content is protected !!