Tuesday, April 30, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಎನ್‌ಐಎಯಿಂದ ಜಾರ್ಜ್‌‌ಶೀಟ್‌ ಸಲ್ಲಿಕೆ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು , ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.

- Advertisement -

Related news

error: Content is protected !!