Friday, April 26, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕೊಲೆಪಾತಕನಿಗೆ ಆಶ್ರಯ ನೀಡಿದ್ದ ಉಪ್ಪಳ ಸೋಂಕಾಲು ವ್ಯಕ್ತಿ ಖಾಕಿ ವಶಕ್ಕೆ..! ತೋಟದ ಯಜಮಾನನ ಫೋನ್‌ನಿಂದ ಹಂತಕನಿಗೆ ಕರೆ ಮಾಡಿದ್ದ ಆಸಾಮಿ??

- Advertisement -G L Acharya panikkar
- Advertisement -

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯಾಗಿ 10 ದಿನ ಕಳೆದರೂ ಹಂತಕರ ಪತ್ತೆ ಇನ್ನೂ ಆಗಿಲ್ಲ. ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ.

ಹಂತಕರು ಕೇರಳ ಮೂಲದವರು ಎಂಬ ಸುಳಿವು ಸಿಕ್ಕಿದ್ದು ಕೇರಳವನ್ನು ಕೇಂದ್ರೀಕರಿಸಿ ತನಿಖೆ ನಡೆಯುತ್ತಿದೆ ಈ ನಡುವೆ ಪೊಲೀಸರಿಗೆ ಮಹತ್ವದ ಸುಳಿವೊಂದು ಪತ್ತೆಯಾಗಿದೆ. ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಎಂದು ಹೇಳಲಾಗುತ್ತಿರುವ ಹಂತಕರೊಂದಿಗೆ ನೇರ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

ಉಪ್ಪಳ ಸೋಂಕಾಲ್ ನಿವಾಸಿ ಪೊಲೀಸರ ವಶಕ್ಕೆ..!
ಬಲ್ಲ ಮೂಲಗಳ ಪ್ರಕಾರ, ಉಪ್ಪಳ ಸೋಂಕಾಲು ನಿವಾಸಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಈ ನಡುವೆ ವಶಕ್ಕೆ ಪಡೆದ ಆಸಾಮಿ 20 ವರ್ಷಗಳ ಹಿಂದೆ ಬೆಳ್ಳಾರೆಯ ತಿಂಗಳಾಡಿ ಎಂಬಲ್ಲಿಂದ ಬಂದು ಸೋಂಕಾಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ ಕಳೆದ ಮೂರು ವರ್ಷಗಳ ಹಿಂದೆ ಮಾಲೀಕ ಹಾಗೂ ಕಾರ್ಮಿಕನ ನಡುವೆ ಏನೋ ತಕರಾರು ನಡೆದು ವ್ಯಕ್ತಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಪ್ರಸ್ತುತ ವಶಕ್ಕೆ ಪಡೆದ ವ್ಯಕ್ತಿಯ ಮನೆಯಲ್ಲಿ ಹತ್ಯೆಯ ಪ್ರಮುಖ ಆರೋಪಿ ಎರಡು ದಿನಗಳ ಕಾಲ ವಾಸವಿದ್ದ ಎನ್ನಲಾಗುತ್ತಿದೆ.

ತೋಟದ ಯಜಮಾನನ ಫೋನ್‌ ನಿಂದ ಹಂತಕನಿಗೆ ಕರೆ..?!
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಪೊಲೀಸರಿಗೆ ಸವಾಲು ಆಗಿತ್ತು. ಈ ನಡುವೆ ಪ್ರಮುಖ ಆರೋಪಿಗೆ ಆಶ್ರಯ ನೀಡಿದ್ದ ವ್ಯಕ್ತಿ ತಾನು ಸಿಲುಕಿ ಬೀಳದ ಹಾಗೆ ತಲೆ ಓಡಿಸಿದ್ದಾನೆ. ಎಂದಿನಂತೆ ಬ್ರಾಹ್ಮಣ ಸಮುದಾಯದವರ ತೋಟದ ಕೆಲಸಕ್ಕೆ ಹೋದಾಗ ಯಜಮಾನನ ಫೋನ್ ತೆಗೆದುಕೊಂಡು ಹಂತಕನೊಂದಿಗೆ ಮಾತನಾಡಿದ್ದಾನೆ. ನಂತರ ಫೋನ್ ನಂಬರ್‍ ಸಿಗದ ರೀತಿಯಲ್ಲಿ ಕಾಲ್ ಚಾಟ್ ಡಿಲೀಟ್ ಮಾಡಿದ್ದಾನೆ. ಆದರೆ ಪೊಲೀಸರಿಗೆ ಈ ಸುಳಿವು ಸಿಕ್ಕಿದ್ದು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಎಂಟ್ರಿ ಕೊಟ್ಟ ಪೊಲೀಸರು ಅಲ್ಲಿಂದಲೇ ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಮಹತ್ವದ ಸುಳಿವು ಬಿಚ್ಚಿಡುತ್ತಾನಾ ಕಾರ್ಮಿಕ..?
ಕರ್ನಾಟಕ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಂತಕರ ಸುಳಿವು ಒಂದೊಂದಾಗಿಯೇ ಬಯಲಾಗುತ್ತಿದೆ.

ಎಡಿಜಿಪಿ ಆಲೋಕ್ ಕುಮಾರ್ ಗುರುವಾರ ಬೆಳ್ಳಾರೆ ಠಾಣೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ, ಡಿವೈಎಸ್ಪಿ ಗಾನ ಪಿ. ಕುಮಾರ್, ಬೆಳ್ಳಾರೆ ಎಸ್ಬಿಐ ಸುಹಾಸ್ ಅವರೊಂದಿಗೆ ತನಿಖೆಯ ಬಗ್ಗೆ ಮಾಹಿತಿ ಪಡೆದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಆಲೋಕ್ ಕುಮಾರ್, ಮಸೂದ್ ಹಾಗೂ ಪ್ರವೀಣ್ ನೆಟ್ಟಾರು ಕುರಿತ ಪ್ರಕರಣದ ಪ್ರಗತಿ ಯಾವ ಹಂತದಲ್ಲಿದೆ ಎಂಬುದನ್ನು ಅವಲೋಕಿಸಲು ಆಗಮಿಸಿದ್ದೇನೆ. ಒಟ್ಟು ತನಿಖೆಯ ಪ್ರಗತಿ ಪರಿಶೀಲನೆ ನಡೆಸಿದ್ದೇನೆ. ಮುಂದೆ ಯಾವ ರೀತಿ ತನಿಖೆ ನಡೆಸಬೇಕು ಎಂಬ ಬಗ್ಗೆಯೂ ನಿರ್ದೇಶನ ನೀಡಲಾಗಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಿಸಿ ಕೆಮರಾ ಅಳವಡಿಸುವಿಕೆ ಮುಂತಾದ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡಿದ್ದೇನೆ. ಪ್ರಕರಣವನ್ನು ಎನ್‌ಐಎಗೆ ನೀಡಿದ್ದರೂ ಕರ್ನಾಟಕ ಪೊಲೀಸರಾಗಿ ನಾವು ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ಎನ್‌ಐಎಯವರು ನಮ್ಮ ಜತೆಗೆ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

- Advertisement -

Related news

error: Content is protected !!