Tuesday, June 9, 2026
spot_imgspot_img
spot_imgspot_img

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಸೌದಿಯಲ್ಲಿ ಪತ್ತೆ , ಕಾರ್ಯಾಚರಣೆ ಚುರುಕುಗೊಳಿಸಿದ ಎನ್‌ಐಎ

- Advertisement -
- Advertisement -
vtv vitla

ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ತಲೆಮರೆಸಿಕೊಂಡಿರುವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಅಧಿಕಾರಿಗಳು ಇತ್ತೀಚೆಗೆ ಘೋಷಿಸಿದ್ದರು.

ಇದೀಗ ಇಬ್ಬರೂ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಆರೋಪಿಗಳಿಬ್ಬರನ್ನೂ ಕರೆತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.

- Advertisement -

Related news

error: Content is protected !!