Sunday, June 14, 2026
spot_imgspot_img
spot_imgspot_img

ಪ್ರಿಯತಮೆಯನ್ನು ಕುಕ್ಕರ್‌ನಿಂದ ಹೊಡೆದು ಹತ್ಯೆ ಮಾಡಿದ ಪ್ರಿಯಕರ

- Advertisement -
- Advertisement -

ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್‌ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿ. ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಕೇರಳ ಮೂಲದವರಾಗಿರುವ ಈ ಜೋಡಿ ಕಳೆದ ಎರಡು ವರ್ಷಗಳಿಂದ ಲಿವಿಂಗ್ ಟುಗೇದರ್ ನಲ್ಲಿತ್ತು. ಇತ್ತೀಚೆಗೆ ಪ್ರಿಯತಮೆ ದೇವಾ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪ ಮಾಡಲಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು. ಶನಿವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ವೈಷ್ಣವ್ ಅಲ್ಲೇ ಇದ್ದ ಕುಕ್ಕರ್‍ನಿಂದ ಯುವತಿಯ ತಲೆಗೆ ಹೊಡೆದಿದ್ದಾನೆ.

ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಪೊಲೀಸರು ಆರೋಪಿ ವೈಷ್ಣವ್‌ನನ್ನು ಬಂಧಿಸಿದ್ದು, ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!