Saturday, April 27, 2024
spot_imgspot_img
spot_imgspot_img

ಪ್ರೀತಿಸಿ, ಮದುವೆಯಾಗುವುದಾಗಿ ಯುವತಿಗೆ ಪೊಲೀಸ್ ಕಾನ್ಸ್ಟೇಬಲ್‌ನಿಂದ ವಂಚನೆ..!

- Advertisement -G L Acharya panikkar
- Advertisement -

ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಪ್ರೀತಿಸಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸೆಬಲ್ ಆಗಿ ಸೇವೆ ಸಲ್ಲಿಸುತ್ತಿರುವ ವಿನಾಯಕ್ ಟಕ್ಕಳಕಿ ವಂಚನೆಗೈದವರು ಎಂದು ತಿಳಿದು ಬಂದಿದೆ. ವಿನಾಯಕ್ ಟಕ್ಕಳಕಿ ಓರ್ವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ದೈಹಿಕವಾಗಿ ಬಳಕೆ ಮಾಡಿಕೊಂಡು ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಯುವತಿ ಕಳೆದ ಎಂಟು ತಿಂಗಳ ಹಿಂದೆ ಕಾನ್ಸ್ಟೇಬಲ್ ವಿನಾಯಕ ಟಕ್ಕಳಕಿಗೆ ಪರಿಚಯವಾಗಿ, ಪರಸ್ಪರ ಫೋನ್ ನಂಬರ್ ಗಳನ್ನು ಬದಲಾಯಿಸಿಕೊಂಡು ಬಳಿಕ ಇಬ್ಬರ ಮಧ್ಯೆ ಪರಸ್ಪರ ವಾಟ್ಸಪ್ ನಲ್ಲಿ ಮೆಸೇಜ್ ಹಾಗೂ ಕಾಲ್ ಮಾಡುವುದು ಆರಂಭವಾಗಿತ್ತು ಎನ್ನಲಾಗಿದೆ. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿ, ಪರಸ್ಪರ ಸಲುಗೆಯಿಂದ ಇದ್ದರು. ಇದೇ ಸಲುಗೆಯಲ್ಲಿ ಯುವತಿ ಜೊತೆಗೆ ಹಲವಾರು ಬಾರಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿ, ಯುವತಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -

Related news

error: Content is protected !!