Friday, April 19, 2024
spot_imgspot_img
spot_imgspot_img

ಪ್ರೀತಿಸಿ ಮದುವೆಯಾದಾಕೆಗೆ ಸಿಗರೇಟಿನಿಂದ ಸುಟ್ಟ ಕಿರಾತಕ ಪತಿ ಅಂದರ್..!

- Advertisement -G L Acharya panikkar
- Advertisement -

ಕುಂದಾಪುರ: ಪ್ರೀತಿಸಿ ಮದುವೆಯಾದ ಪತ್ನಿ ಗರ್ಭಿಣಿ ಎಂದೂ ಲೆಕ್ಕಿಸದೆ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪಾಪಿ ಪತಿಯ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಬಂಧಿತ ಆರೋಪಿ. ಸಿದ್ದಾಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತ ಮಹಿಳೆ ಬೀಜಾಡಿ ನಿವಾಸಿ ಪ್ರಿಯಾಂಕ(21) ಕಿರುಕುಳಕ್ಕೊಳಗಾಗಿದ್ದು ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರದೀಪ್ ಹಾಗೂ ಪ್ರಿಯಾಂಕ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯಾಗಿ ನಾಲ್ಕೈದು ತಿಂಗಳು ಕಳೆಯುತ್ತಿದ್ದಂತೆಯೇ ಪ್ರದೀಪ್ ತನ್ನ ಪತ್ನಿಯಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ತವರು ಮನೆಯಿಂದ ಚಿನ್ನ ಹಾಗೂ ಹಣವನ್ನು ತರುವಂತೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ಪ್ರದೀಪ್ ತನ್ನ ಪತ್ನಿ ಪ್ರಿಯಾಂಕಾಗೆ ಸಿಗರೇಟಿನಿಂದ ಮುಖಕ್ಕೆ ಸುಟ್ಟು ಚಿತ್ರಹಿಂಸೆ ನೀಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ನಿ ಕೈಮುಗಿದು ಬೇಡುವೆ ಸುಡಬೇಡಿ ಎಂದು ಪರಿಪರಿಯಾಗಿ ಬೇಡಿಕೊಂಡರೂ, ಕಾಲಿಗೆ ಬೀಳುತ್ತೇನೆಂದರೂ ಕೂಡ ಪ್ರದೀಪ್ ವಿಕೃತಿ‌ ಮೆರೆದಿದ್ದ.

ಸಿಗರೇಟಿನಿಂದ ಸುಟ್ಟು ಗಾಯಗೊಳಿಸಿದ ಬಳಿಕ ಮಗುವನ್ನು ಕೊಲ್ಲುವುದಾಗಿ ಹೇಳಿ ಹೊಟ್ಟೆಗೆ ತುಳಿದಿದ್ದಾನೆ. ಈ ವೇಳೆಯಲ್ಲಿ ಪ್ರಿಯಾಂಕ ತಪ್ಪಿಸಿಕೊಂಡ ಪರಿಣಾಮ ಸೊಂಟಕ್ಕೆ ಪೆಟ್ಟು ತಗುಲಿದೆ. ಆರೋಪಿ ಪ್ರದೀಪನೇ ತಾನು ಮಾಡಿದ ಕೃತ್ಯವನ್ನು ತನ್ನ ಮೊಬೈಲ್‍ನಲ್ಲಿ ವಿಡಿಯೋ ಚಿತ್ರೀಕರಿಸಿ ಪ್ರಿಯಾಂಕ ಅವರ ಪೋಷಕರಿಗೆ ಕಳುಹಿಸಿ 2ಲ್ಷಕ ರೂ ಹಣ ಹಾಗೂ 4 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ಹಣ ಮತ್ತು ಚಿನ್ನ ನೀಡದೇ ಇದ್ದಲ್ಲಿ ಕೊಲ್ಲುವ ಬೆದರಿಕೆಯೊಡ್ಡಿದ್ದಾನೆ ಎಂದು ಪ್ರಿಯಾಂಕ ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

- Advertisement -

Related news

error: Content is protected !!