Monday, April 29, 2024
spot_imgspot_img
spot_imgspot_img

ಪ್ಲೈಓವರ್ ಮೇಲೆ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು!

- Advertisement -G L Acharya panikkar
- Advertisement -

ಬೆಂಗಳೂರು: ಪ್ಲೈಓವರ್ ಮೇಲೆ ಐದು ಮಂದಿ ಸ್ನೇಹಿತರು ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದಾರೆ

ಮೃತರನ್ನು ವೈಟ್ ಫೀಲ್ಡ್ ನಿವಾಸಿಗಳಾದ ದಿನೇಶ್ ಹಾಗೂ ವಿನಯ್ ಎನ್ನಲಾಗಿದೆ. ಅಂಕಿತ್, ಜನಾರ್ದನ್, ಜಾಸ್ಮಿನ್ ಎಂಬ ಮೂವರಿಗೆ ಗಾಯವಾಗಿದೆ. ಈ ಪೈಕಿ ಅಂಕಿತ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ತಡ ರಾತ್ರಿ ಐವರ ಸ್ನೇಹಿತರು ತಾವರೆಕರೆಯ ಬಳಿಯ ಫ್ಲೈಓವರ್ ಬಳಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಇದೇ ವೇಳೆ ವೇಗವಾಗಿ ಬಂದ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಯುವಕರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಚಾಲಕ ವಾಹನ ತೊರೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಘಟನೆ ಬಗ್ಗೆ ನಂದಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!