Saturday, April 20, 2024
spot_imgspot_img
spot_imgspot_img

(ಫೆ.10 ಮತ್ತು ಫೆ.11) ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಆನಂದೋತ್ಸವ

- Advertisement -G L Acharya panikkar
- Advertisement -
vtv vitla
vtv vitla

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರ, ದಕ್ಷಿಣ ಗಾಣಗಾಪುರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ವೇ|ಮೂ| ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ ಪೂಜ್ಯ ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ-ಆನಂದೋತ್ಸವವು ಫೆ.10 ಮತ್ತು ಫೆ.11ರಂದು ಜರಗಲಿರುವುದು.

ಫೆ. 10ರ ಗುರುವಾರದಂದು ‘ಇರುವತ್ತರಡ್ಡನೇ ಐಸಿರೊ’ ತುಳು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಬೆಳಗ್ಗೆ 9:30 ಮೆರವಣಿಗೆ, 10 ಕ್ಕೆ ಉದ್ಘಾಟನ ಕಾರ್ಯಕ್ರಮ,2:30ಕ್ಕೆ ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ – ಪೆರಿಯ 60 ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹಾಗೂ ಸಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.

ಫೆ.11ರ ಶುಕ್ರವಾರದಂದು ಶ್ರೀ ಒಡಿಯೂರು ರಥೋತ್ಸವ; ತುಳುನಾಡ ಜಾತ್ರೆ ನಡೆಯಲಿದೆ. ಬೆಳಗ್ಗೆ 9.00ಗಂಟೆಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ, 10:00ರಿಂದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಷಷ್ಠ್ಯಬ್ದ ಸಂಭ್ರಮ-ಜ್ಞಾನವಾಹಿನಿ ಕಾರ್ಯಕ್ರಮದ ಸಮಾರೋಪ ಸಮಾರಂಭ ‘ಆನಂದೋತ್ಸವ-ಗುರುವಂದನೆ’ ಮಧ್ಯಾಹ್ನ 12.30ರಿಂದ: ಮಹಾಪೂಜೆ, ಮಹಾಮಂಗಳಾರತಿ, ಮಹಾಸಂತರ್ಪಣೆ ಅಪರಾಹ್ನ ಶ್ರೀ ದತ್ತಾಂಜನೇಯ ದೇವರ ವೈಭವೋಪೇತ ರಥಯಾತ್ರೆ ನಡೆಯಲಿದೆ.

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ, ಶ್ರೀಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್, ವಿಟ್ಲ ಸೀಮೆ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆ, ಚೆಂಡೆಮೇಳ, ಗೊಂಬೆ ಕುಣಿತ, ತಾಲೀಮು ಪ್ರದರ್ಶನ, ಸಿಡಿಮದ್ದು ಪ್ರದರ್ಶನ ನಡೆಯಲಿದೆ.

ಸಂಜೆ ಗಂಟೆ 6.00ರಿಂದ: ಕನ್ಯಾನ ಸದ್ಗುರು ನಿತ್ಯಾನಂದ ಮಂದಿರದ ಬಳಿ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮ್ಯೆ’ ಯಕ್ಷಗಾನ ಬಯಲಾಟ, ಮತ್ತು ಕಮ್ಮಾಜೆಯಲ್ಲಿ ಅಮ್ಮಾಗ್ರೂಪ್ಸ್ ನ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ

vtv vitla
vtv vitla
- Advertisement -

Related news

error: Content is protected !!