Monday, May 6, 2024
spot_imgspot_img
spot_imgspot_img

ಫೆ. 5ರಂದು ಹೈದರಾಬಾದ್​ಗೆ ಪ್ರಧಾನಿ ಮೋದಿ ಭೇಟಿ; ರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆ ಅನಾವರಣ

- Advertisement -G L Acharya panikkar
- Advertisement -

ನವದೆಹಲಿ: ICRISATನ 50ನೇ ವಾರ್ಷಿಕೋತ್ಸವದ ಪ್ರಯುಕ್ತ ಮತ್ತು 11ನೇ ಶತಮಾನದ ಭಕ್ತಿ ಸಂತ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 5ರಂದು ಹೈದರಾಬಾದ್‌ಗೆ ಭೇಟಿ ನೀಡಲಿದ್ದಾರೆ. ತೆಲಂಗಾಣ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಇಂದು ಪ್ರಧಾನಿ ಮೋದಿ ಭೇಟಿಯ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಈ ಸ್ಥಳಗಳಲ್ಲಿ ಬ್ಲೂ ಬುಕ್ ಪ್ರಕಾರ ಸಂಚಾರ ವ್ಯವಸ್ಥೆ ಮತ್ತು ಬಂದೋಬಸ್ತ್ ಜೊತೆಗೆ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.

ಪ್ರಧಾನ ಕಾರ್ಯದರ್ಶಿ ಸೋಮೇಶ್ ಕುಮಾರ್ ಇಂದು ಬಿಆರ್‌ಕೆಆರ್ ಭವನದಲ್ಲಿ ಪ್ರಧಾನ ಮಂತ್ರಿ ಮುಚಿಂತಲ್ ಮತ್ತು ಇಕ್ರಿಸ್ಯಾಟ್‌ಗೆ ಭೇಟಿ ನೀಡುವ ಸಲುವಾಗಿ ಮಾಡಬೇಕಾದ ವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿದ್ದಾರೆ.

vtv vitla
vtv vitla

ಫೆ. 5ರಂದು ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆಯು ‘ಪಂಚಲೋಹ’ದಿಂದ ಮಾಡಲ್ಪಟ್ಟಿದೆ. ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಜಿಂಕ್ ಸಮ್ಮಿಶ್ರಣದಿಂದ ನಿರ್ಮಿಸಲಾಗಿರುವ ಈ ಪ್ರತಿಮೆ ವಿಶ್ವದ ಅತ್ಯಂತ ಎತ್ತರದ ಲೋಹದ ಪ್ರತಿಮೆಗಳಲ್ಲಿ ಒಂದಾಗಿದೆ.

ಶನಿವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಮಾನುಜಾಚಾರ್ಯರ ಜೀವನ ಪಯಣ ಮತ್ತು ಬೋಧನೆ ಕುರಿತು 3ಡಿ ಪ್ರೆಸೆಂಟೇಶನ್ ಮ್ಯಾಪಿಂಗ್ ಪ್ರದರ್ಶಿಸಲಾಗುವುದು. ಹಾಗೇ, ಪ್ರಧಾನಮಂತ್ರಿ ಮೋದಿ ICRISATನ ಹವಾಮಾನ ಬದಲಾವಣೆ ಸಂಶೋಧನಾ ಸೌಲಭ್ಯವನ್ನು ಸಸ್ಯ ಸಂರಕ್ಷಣೆ ಮತ್ತು ICRISATನ ಕ್ಷಿಪ್ರ ಜನರೇಷನ್ ಅಡ್ವಾನ್ಸ್‌ಮೆಂಟ್ ಫೆಸಿಲಿಟಿಯನ್ನು ಉದ್ಘಾಟಿಸಲಿದ್ದಾರೆ.

ಸುಮಾರು 216 ಅಡಿ ಉದ್ದವಿರುವ ಈ ಪ್ರತಿಮೆಯ ನಿರ್ಮಾಣಕ್ಕೆ 1800 ಟನ್‌ಗಳಿಗಿಂತ ಹೆಚ್ಚು ಪಂಚ ಲೋಹಗಳನ್ನು ಬಳಸಲಾಗಿದೆ.

vtv vitla
vtv vitla
- Advertisement -

Related news

error: Content is protected !!