- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ಯುರೋಪಿಯನ್ ರಾಷ್ಟ್ರಗಳ ಪ್ರವಾಸದ ಮೂರನೇ ಮತ್ತು ಅಂತಿಮ ದಿನದಲ್ಲಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ತೆರಳಿದ್ದಾರೆ. ಫ್ರಾನ್ಸ್ನಲ್ಲಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದರು. ಸಂವಾದದ ಸಮಯದಲ್ಲಿ, ಫ್ರೆಂಚ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮರು ಆಯ್ಕೆಯಾದ ಮ್ಯಾಕ್ರನ್ ಅವರನ್ನು ಪ್ರಧಾನಿ ಅಭಿನಂದಿಸಿದರು.

ಪ್ಯಾರಿಸ್‌ನ ಎಲಿಸೀ ಪ್ಯಾಲೇಸ್‌ನಲ್ಲಿ ಪ್ರಧಾನಿ ಮೋದಿಯವರಿಗೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆತ್ಮೀಯ ಸ್ವಾಗತ ನೀಡಿದರು. ಈ ವೇಳೆ ಮಾಕನ್ ಮತ್ತು ಮೋದಿ ಪರಸ್ಪರ ಅಪ್ಪಿಕೊಂಡರು. ಪ್ಯಾರಿಸ್‌ನಲ್ಲಿರುವ ಫ್ರಾನ್ಸ್ ಅಧ್ಯಕ್ಷರ ಅಧಿಕೃತ ನಿವಾಸ ಎಲಿಸೀ ಪ್ಯಾಲೇಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರು ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ನಾಯಕರ ನಡುವೆ ಹಲವು ಪ್ರಮುಖ ವಿಷಯಗಳ ಕುರಿತು ವ್ಯಾಪಕ ಚರ್ಚೆ ನಡೆದಿದೆ.


- Advertisement -