Saturday, May 4, 2024
spot_imgspot_img
spot_imgspot_img

ಫ್ಲೈಓವರ್‌ನಿಂದ ರೈಲ್ವೇ ಹಳಿಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಕಾರೊಂದು ಮೇಲ್ಸೇತುವೆ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಹಾರಾಷ್ಟ್ರದಲ್ಲಿ ನಡೆದಿದೆ.

ಬೆಳಿಗ್ಗೆ 7:30ರ ಸುಮಾರಿಗೆ ನಾಗ್ಪುರದ ಬೋರ್ಖೆಡಿ ಮೇಲ್ಸೇತುವೆಯ ಮೇಲೆ ಕಾರು ಚಲಿಸುತ್ತಿತ್ತು. ಈ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಅತಿ ವೇಗದಲ್ಲಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬುಟಿಬೋರಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂದು ತನಿಖೆ ಬಳಿಕ ತಿಳಿಯಲಿದೆ. ಸದ್ಯ ಗಾಯಾಳುಗಳು ಚೇತರಿಸಿಕೊಂಡ ಬಳಿಕ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!