Tuesday, April 16, 2024
spot_imgspot_img
spot_imgspot_img

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿದಂತೆ ಹಲವೆಡೆ ಇನ್ನೆರಡು ದಿನ ಸಾಧಾರಣ ಮಳೆ

- Advertisement -G L Acharya panikkar
- Advertisement -

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.

ಕಳೆದೊಂದು ವಾರದಿಂದ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ಮಳೆಯ ಜೊತೆ ಚಳಿಯೂ ಇತ್ತು. ಆದರೆ, ಗುರುವಾರದ ಬಳಿಕ ಮಳೆಯಾಗಿಲ್ಲ. ಚುಮು ಚುಮು ಚಳಿಯ ವಾತಾವರಣ ಮುಂದುವರೆದಿದೆ. ಮುಂಜಾನೆ ವೇಳೆ ಇಬ್ಬನಿಯೂ ಇದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳ ಕಾಲ ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ, ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಚಂಡಮಾರುತದ ಪರಿಚಲನೆ ಇದೆ ಎಂದು ಹೇಳಿದೆ. ಈಶಾನ್ಯ ಮಾನ್ಸೂನ್ ಮಾರುತವು ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ದಕ್ಷಿಣ ಭಾರತದಲ್ಲಿ ಅದರಲ್ಲೂ ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

- Advertisement -

Related news

error: Content is protected !!