Thursday, September 10, 2026
spot_imgspot_img
spot_imgspot_img

ಬಂಟ್ವಾಳ: ಅಂಬ್ಯುಲೆನ್ಸ್ ಗೆ ಟಿಪ್ಪರ್ ಡಿಕ್ಕಿ; ರೋಗಿ ಅಪಾಯದಿಂದ ಪಾರು

- Advertisement -
- Advertisement -

ಬಂಟ್ವಾಳ: ಟಿಪ್ಪರ್ ಲಾರಿಯೊಂದು ಅಂಬ್ಯುಲೆನ್ಸ್ ವಾಹನಕ್ಕೆ ಡಿಕ್ಕಿಯಾದ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬ ಲ್ಲಿ ರಾತ್ರಿ ವೇಳೆ ನಡೆದಿದೆ.

ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಸುಳ್ಯ ಕೆ.ವಿ.ಜಿ.ಆಸ್ಪತ್ರೆಗೆ ಸೇರಿದ ‌ಆಂಬ್ಯುಲೆನ್ಸ್ ಇದಾಗಿದ್ದು, ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ‌ಘಟನೆ ನಡೆದಿದೆ.
ದಿವ್ಯ ರೂಪ ಗುತ್ತಿಗೆ ಸಂಸ್ಥೆಗೆ ಸೇರಿದ ಲಾರಿ‌ ಇದಾಗಿದ್ದು, ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯವಾಗಿಲ್ಲ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಅಂಬ್ಯುಲೆನ್ಸ್ ವಾಹನದ ಮುಂಭಾಗದ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಂಬ್ಯುಲೆನ್ಸ್ ವಾಹನದಲ್ಲಿದ್ದ ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಸಾಗಿಸಿದ್ಧಾರೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!