Saturday, May 18, 2024
spot_imgspot_img
spot_imgspot_img

ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ!- ಜಗದೀಶ್ ಕಾರಂತ ಆಕ್ರೋಶ

- Advertisement -G L Acharya panikkar
- Advertisement -
vtv vitla
vtv vitla
vtv vitla

ಬಂಟ್ವಾಳ: ಕಾರಿಂಜ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಹಾಗೂ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವುದರ ವಿರುದ್ಧ ಜನಜಾಗೃತಿ ಮೂಡಿಸಲು ಕಾರಿಂಜ ರಥಬೀದಿಯಲ್ಲಿ ಭಾನುವಾರ ಸಂಜೆ ‘ರುದ್ರಗಿರಿಯ ರಣ ಕಹಳೆ’ ಜನಜಾಗೃತಿ ಸಭೆ ನಡೆಯಿತು.

ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ, ಅವರು ಜಿಲ್ಲಾಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಧಿಕಾರಿಗೆ 30 ದಿನಗಳ ಕಾಲಾವಕಾಶ ನೀಡುತ್ತಿದ್ದೇವೆ. ತಪ್ಪಿದ್ದಲ್ಲಿ ಡಿ. 21ರಂದು ಸಾವಿರಾರು ಜನರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳಪಟ್ಟಿಯನ್ನೇ ಹಿಡಿಯುತ್ತೇವೆ. ತಾಕತ್ತಿದ್ದರೆ ಗಣಿಗಾರಿಕೆ ನಿಲ್ಲಿಸು. ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು, ಹೊರಗೆ ಹೋಗು ಎಂದು ಜಗದೀಶ್ ಕಾರಂತ ಏಕವಚನದಲ್ಲೇ ಜಿಲ್ಲಾಧಿಕಾರಿಗೆ ಜಾಡಿಸಿದ್ದಾರೆ.

ಅಕ್ರಮ ಗಣಿಗಾರಿಕೆಯನ್ನು 24 ಗಂಟೆಯೊಳಗೆ ನಿಲ್ಲಿಸುವ ಅಧಿಕಾರ ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಜಿಲ್ಲಾಧಿಕಾರಿಗೆ ಇದೆ. ಗಣಿಗಾರಿಕೆ ನಿಲ್ಲಿಸಲು ಅಸಾಧ್ಯವಾದರೆ ರಾಜೀನಾಮೆ ನೀಡಿ ಮನೆಗೆ ಹೋಗು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೂ ತಾಕೀತು ಮಾಡಿದ ಜಗದೀಶ್ ಕಾರಂತ, ಅಕ್ರಮ ಗಣಿಗಾರಿಕೆ ಮಾಡಿ ಒಂದೇ ಒಂದು ವಾಹನ ರಸ್ತೆಗೆ ಇಳಿಯಲು ನಾವು ಬಿಡುವುದಿಲ್ಲ. ಆಕಸ್ಮಾತ್ ವಾಹನ ರಸ್ತೆಗೆ ಇಳಿದರೆ ಅದರ ಡ್ರೈವರ್ ಜೀವಂತವಾಗಿ ಹೋಗುವುದಿಲ್ಲ ಎಂದು ಗುಡುಗಿದರು.

vtv vitla
vtv vitla
- Advertisement -

Related news

error: Content is protected !!