Thursday, April 25, 2024
spot_imgspot_img
spot_imgspot_img

ಬಂಟ್ವಾಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ.!

- Advertisement -G L Acharya panikkar
- Advertisement -

ಬಂಟ್ವಾಳ : ಸಂಗಬೆಟ್ಟು ಪಂಚಾಯತ್ ವ್ಯಾಪ್ತಿಯ ಸಿದ್ದಕಟ್ಟೆ ಮಾರ್ಕೆಟ್ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಮಲಗಿದ ಸ್ಥಿತಿಯಲ್ಲಿ ಕಂಡುಬoದಿದೆ.

ಸ್ಥಳಕ್ಕೆ ಸಂಗಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದಾಗ ಸುಮಾರು 65 ವರ್ಷದ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಎಂದು ತಿಳಿಸಲಾಗಿದೆ.

ವ್ಯಕ್ತಿಯು ಐದು ಅಡಿ ಎತ್ತರವಿದ್ದು, ಕೆಂಪು ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತರೆ ಬಂಟ್ವಾಳ ಠಾಣೆಗೆ ತಿಳಿಸಬೇಕಾಗಿ ಪೊಲೀಸರು ಪ್ರಕಟನೆ ಹೊರಡಿಸಿದ್ದಾರೆ.

- Advertisement -

Related news

error: Content is protected !!