Tuesday, March 19, 2024
spot_imgspot_img
spot_imgspot_img

ಬಂಟ್ವಾಳ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

- Advertisement -G L Acharya panikkar
- Advertisement -

ಬಂಟ್ವಾಳ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ನಡೆದಿದೆ.

ಬಾಲಕಿ ಸರಕಾರಿ ಪ್ರೌಢ ಶಾಲೆವೊಂದರಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮೊಬೈಲ್ ನಲ್ಲಿ ಇನ್ಸ್ಟಾಗ್ರಾಮ್ ಮೂಲಕ ಬಾಲಕನೋರ್ವನ ಪರಿಚಯವಾಗಿದ್ದು, ಬಳಿಕ ಬಾಲಕ ಆಗಾಗ ಸಂತ್ರಸ್ತ ಬಾಲಕಿಯ ಮನೆಗೆ ಬಂದು ಹೋಗುತ್ತಿದ್ದನು.

ಡಿ.2ರಂದು ಸಂತ್ರಸ್ತ ಬಾಲಕಿ ಮನೆಯಲ್ಲಿದ್ದ ವೇಳೆ ಬಾಲಕ ಫೋನ್ ಕರೆ ಮಾಡಿ ರಾತ್ರಿ ಸಂತ್ರಸ್ತೆಯ ಮನೆಗೆ ಬಂದಿದ್ದು, ಬಾಲಕಿ ತಾಯಿಯ ಬಳಿ ಬಾಲಕನ ಮನೆಗೆ ಹೋಗಿ ಬರುವುದಾಗಿ ಹೇಳಿ ಆತ ಆಕೆಯನ್ನು ತನ್ನೊಂದಿಗೆ ಸ್ಕೂಟರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಸಂತ್ರಸ್ತ ಬಾಲಕಿಯನ್ನು ಮನೆಗೆ ಬಿಟ್ಟು ಹೋಗಿದ್ದಾನೆ.

ಸಂತ್ರಸ್ತ ಬಾಲಕಿಯ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 91/2022 ಕಲಂ 366(A), 376 IPC ಮತ್ತು ಕಲಂ 4 POCSO Act ಪ್ರಕಾರ ಪ್ರಕರಣ ದಾಖಲಾಗಿದೆ.

ಬಾಲಕನನ್ನು ಬಾಲ ನ್ಯಾಯ ಮಂಡಳಿಯ ಎದುರು ಹಾಜರುಪಡಿಸಿದ್ದು, ಬಾಲಕನನ್ನು ರಿಮಾಂಡ್ ಹೋಂ ಗೆ ಹಸ್ತಾಂತರಿಸಲು ಆದೇಶಿಸಲಾಗಿದೆ.

- Advertisement -

Related news

error: Content is protected !!