Thursday, September 10, 2026
spot_imgspot_img
spot_imgspot_img

ಬಂಟ್ವಾಳ: ಕಾರು, ಆಟೋ ರಿಕ್ಷಾ ನಡುವೆ ಢಿಕ್ಕಿ; ಮಹಿಳೆ ದಾರುಣ ಸಾವು..!

- Advertisement -
- Advertisement -

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ದಾರುಣ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ. ಮೃತ ಮಹಿಳೆ ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ (70) ಎನ್ನಲಾಗಿದೆ.

ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ. ಈ ಘಟನೆ ಬಗ್ಗೆಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!