Monday, April 29, 2024
spot_imgspot_img
spot_imgspot_img

ಬಂಟ್ವಾಳ: ಕೈ ನಾಯಕರೊಳಗೆ ಟಿಕೆಟ್‌ಗಾಗಿ ಪೈಪೋಟಿ; ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಮೂವರು ಆಕಾಂಕ್ಷಿಗಳು; ಕೈ ಮೇಲಕ್ಕೆ ಎತ್ತುವರಾರು..?

- Advertisement -G L Acharya panikkar
- Advertisement -

ಬಂಟ್ವಾಳ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿಸಿಕೊಂಡ ಕಾಂಗ್ರೇಸ್ ಪಕ್ಷ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರದದಿಂದಲೂ ಟಿಕೆಟ್‌ ಅಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ.

ಈಗಾಗಲೇ ಟಿಕೆಟ್ ಅಕಾಂಕ್ಷಿಗಳ ಅರ್ಜಿ ಸಲ್ಲಿಕೆಯ ಭರಾಟೆ ಜೋರಾಗಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ರಾಜಕೀಯ ತವರೂರು ಆಗಿರುವ ಬಂಟ್ವಾಳದಿಂದಲೂ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಮಾಜಿ ಸಚಿವ ಕಾಂಗ್ರೆಸ್‌ ವಲಯದಲ್ಲಿ ಹಿರಿಯಣ್ಣನಾಗಿರುವ ಬಂಟ್ವಾಳ ಕ್ಷೇತ್ರದ ಜೊತೆಗೆ ರಾಜ್ಯದಲ್ಲಿ ಸರ್ವಾಂಗೀಣ ಅಭಿವೃದ್ಧಿಯ ನಾಯಕ ಬಿ.ರಮಾನಾಥ ರೈ ಅವರು ಅರ್ಜಿ ಸಲ್ಲಿಸಿದ್ದಾರೆ.

ಇವರ ಜೊತೆಯಲ್ಲಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಕಂಡ ರಾಕೇಶ್ ಮಲ್ಲಿ ಹಾಗೂ ಯುವ ನಾಯಕ, ಸೌಮ್ಯವಾದಿ, ಯುವ ನ್ಯಾಯವಾದಿ, ಮೇನಾಲ ಗುತ್ತು ಅಶ್ವನಿ ಕುಮಾರ್ ರೈ ಅವರು ಕೂಡ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಇವರ ಜೊತೆಗೆ ಬಂಟ್ವಾಳ ಕ್ಷೇತ್ರದ ಯುವ ನಾಯಕ, ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಕಾನ್ ಅವರು ಸುರತ್ಕಲ್ ಕ್ಷೇತ್ರದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ, ಮಾಜಿ ಜಿ.ಪಂ.ಉಪಾಧ್ಯಕ್ಷ ಎಂ.ಎಸ್‌.ಮಹಮ್ಮದ್ ಅವರು ಪುತ್ತೂರು ಕ್ಷೇತ್ರದಿಂದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಬಂಟ್ವಾಳ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಸ್ಪರ್ಧೆ; ರಾಕೇಶ್‌ ಮಲ್ಲಿ

ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಾನು ಬೆಂಗಳೂರಿನಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿದ್ದೇನೆ. ಹೈಕಮಾಂಡ್ ಕಳೆದ ಬಾರಿ ಕುಂದಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ನೀಡಿದೆ. ಈ ಬಾರಿ ನಾನು ಬಂಟ್ವಾಳ ಕ್ಷೇತ್ರದ ಟಿಕೆಟ್ ಅಕಾಂಕ್ಷಿಯಾಗಿದ್ದು, ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಟಿಕೆಟ್ ನಿರಾಕರಿಸಿದರೆ, ನಾನು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಯಾರಿಗೆ ಟಿಕೆಟ್ ನೀಡುತ್ತಾರೆ. ಅವರ ಪರವಾಗಿ ಪಕ್ಷದ ಗೆಲುವಿಗಾಗಿ ನಾನು ಕೆಲಸ ಮಾಡುತ್ತೇನೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಅಶ್ವನಿ ಕುಮಾರ್ ರೈ

ಹೊಸ ಮುಖಗಳಿಗೆ ಈ ಬಾರಿ ಅವಕಾಶ ನೀಡಲಾಗುತ್ತದೆ ಎಂಬ ಪಕ್ಷದ ಚಿಂತನೆಯ ಮೇರೆಗೆ ನಾನು ಟಿಕೆಟ್ ಗಾಗಿ ಅರ್ಜಿ ಹಾಕಿದ್ದೇನೆ. ಬಂಟ್ವಾಳ ಕ್ಷೇತ್ರದ ಟಿಕೆಟ್ ಅಕಾಂಕ್ಷಿಯಾಗಿದ್ದು, ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನ ಎಂದು ಅಶ್ವನಿ ಕುಮಾರ್ ರೈ ಹೇಳಿದ್ದಾರೆ.

- Advertisement -

Related news

error: Content is protected !!