Thursday, June 18, 2026
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಇಬ್ಬರು ಗಂಭೀರ

- Advertisement -
- Advertisement -
vtv vitla

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಘಟನೆ ವೇಳೆ ರಿಕ್ಷಾದಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಇನ್ನು ಗಾಯಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಪಷ್ಟವಾದ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಿದೆ

- Advertisement -

Related news

error: Content is protected !!