Friday, April 26, 2024
spot_imgspot_img
spot_imgspot_img

ಬಂಟ್ವಾಳ: ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೀವಾವಧಿ ಶಿಕ್ಷೆ

- Advertisement -G L Acharya panikkar
- Advertisement -

ಬಂಟ್ವಾಳ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಬಂಟ್ವಾಳ ಉಪವಿಭಾಗದ ಐಪಿಎಸ್ ಸೈದುಲ್ ಅದಾವತ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಸತೀಶ್ ಪೂಜಾರಿ ಬಂಟ್ವಾಳ ತಾಲ್ಲೂಕಿನ ಗ್ರಾಮವೊಂದರಲ್ಲಿ 2019ರ ಫೆ 1 1ರಂದು ಮಧ್ಯಾಹ್ನ, ಪರಿಶಿಷ್ಟ ಪಂಗಡದ ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಅಪರಾಧ ನಡೆಸಿದ್ದ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2019ರ ಮಾರ್ಚ್ 22ರಂದು ಪ್ರಕರಣ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 448, 376, ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 4 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1) ಡಬ್ಲ್ಯು(1), 3(2)(5ಎ)ರ ಅಡಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯದಲ್ಲಿ ವಿಚಾರಣೆ ಮುಕ್ತಾಯಗೊಂಡು ಆರೋಪ ಸಾಬೀತಾಗಿ ಶಿಕ್ಷೆ ಪ್ರಕಟಿಸಲಾಗಿದೆ. ಆರೋಪಿಗೆ 10 ವರ್ಷ ಜೈಲು ವಾಸ, 10 ಸಾವಿರ ದಂಡ, ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ, 6 ತಿಂಗಳ ಜೈಲುವಾಸ, 1 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶ ಹೊರಡಿಸಲಾಗಿದೆ.

- Advertisement -

Related news

error: Content is protected !!