Tuesday, June 30, 2026
spot_imgspot_img
spot_imgspot_img

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಮೃತ್ಯು

- Advertisement -
- Advertisement -
driving

ಬಂಟ್ವಾಳ: ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಪಾದಾಚಾರಿಯೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ.

ಕೃಷ್ಣಮೂರ್ತಿ ಎಂಬವರು ಮೃತಪಟ್ಟ ಪಾದಾಚಾರಿ. ಆರೋಪಿ ದ್ವಿಚಕ್ರ ವಾಹನ ಸವಾರನನ್ನು ರೋಹಿತ್ ಎಂದು ಗುರುತಿಸಲಾಗಿದೆ.

ಸೆ.12 ರಂದು ಸಜೀಪಮೂಡದ ಚೇತನ್ ಎಂಬವರು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಎದುರಿನಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಕೃಷ್ಣಮೂರ್ತಿ ಎಂಬವರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕೃಷ್ಣಮೂರ್ತಿಯವರು ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರ ರೋಹಿತ್ ನ ಅತೀ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಕಾರಣವಾಗಿದ್ದು, ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತ್ಯಕ್ಷದರ್ಶಿ ಚೇತನ್ ರವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಘಟನೆಯ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!