Thursday, June 18, 2026
spot_imgspot_img
spot_imgspot_img

ಬಂಟ್ವಾಳ: ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಡೇಶಿವಾಲಯದಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ: ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಡೇಶಿವಾಲಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಡೇಶಿವಾಲಯ ಗ್ರಾ.ಪಂ. ಅಧ್ಯಕ್ಷರಾದ ಸುರೇಶ್ ಬನಾರಿ ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳ್ಳಿಪಾಡಿ ಗುತ್ತು ರವರು ಕಾರ್ಯಕ್ರಮದ ಮಧ್ಯೆ ಆಗಮಿಸಿ ನೆರೆದಂತ ಎಲ್ಲರಿಗೂ ಶುಭಾಶಯಗಳು ಕೋರಿದರು.
ಸಭಾ ಕಾರ್ಯಕ್ರಮದಲ್ಲಿ ಜಯ ಆರ್ ದೇವಾಡಿಗ, ಸುರೇಶ್ ಪೂಜಾರಿ, ಶ್ರೀನ ನಾಯ್ಕ, ಪ್ರಮೀಳಾ ಕೋಡಿ, ವಶಿತಾ ನೆತ್ತರ, ಮಾಧವ ರೈ, ಶರತ್, ಗಣೇಶ್ ಆರ್ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ನಿವೃತ್ತ ಶಿಕ್ಷಕಿ ಸರಸ್ವತಿ ಕಾರಂತ ಅಣ್ಣೆಂಗಳ ರವರನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿ, ಎಸ್ ಡಿ ಎಂ ಸಿ ಅಧ್ಯಕ್ಷ ಹರಿಶ್ಚಂದ್ರ ಎಂ. ವಂದಿಸಿದರು. ಶಾಲಾ ಸಹ ಶಿಕ್ಷಕ ಸತೀಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

- Advertisement -

Related news

error: Content is protected !!