Friday, June 19, 2026
spot_imgspot_img
spot_imgspot_img

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಕೌಳಿಗೆ ನಿವಾಸಿ ಪರಮೇಶ್ವರ(75) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮನೆಯಿಂದ ಕೈಯಲ್ಲಿ ಟಾರ್ಚ್ ಹಿಡಿದು ಕೊಂಡು ಹೊರಗೆ ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಇವರ ಮಗ ಶಿವಾನಂದ ದೂರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಜೀಪ ಮುನ್ಮೂರು ಗ್ರಾಮದ ಮಡಿವಾಳಪಡ್ಪು ಎಂಬಲ್ಲಿ ಮನೆಯ ಬದಿಯಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಇವರ ಶವ ತೇಲಾಡುತ್ತಿದ್ದನ್ನು ನೋಡಿ ಸ್ದಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ‌ ಪರಿಶೀಲನೆ‌ ನಡೆಸಿದ್ದಾರೆ.

- Advertisement -

Related news

error: Content is protected !!