Saturday, April 20, 2024
spot_imgspot_img
spot_imgspot_img

ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಬಂಟ್ವಾಳ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ನಯನಾಡು ಪರಿಸರದ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ರಾಜೇಶ್ ಅವರು ನಯನಾಡುವಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆ ಆಗಿದ್ದಾರೆ ಎಂದು ಕುಟುಂಬಸ್ಥರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದರು.

ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು. ರವಿವಾರ ಬೆಳಗ್ಗೆ ರಾಜೇಶ್ ಅವರ ಮೃತದೇಹ ನಯನಾಡಿನ ಖಾಸಗಿ ಜಮೀನಿನ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!