Tuesday, June 9, 2026
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ಹೋದ ವಿದ್ಯಾರ್ಥಿಗಳ ತಂಡ; ಓರ್ವ ನೀರು ಪಾಲು, ನಾಲ್ವರ ರಕ್ಷಣೆ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ಐವರು ಬಾಲಕರ ತಂಡ ಈಜಲು ಹೋಗಿದ್ದು, ಇದರಲ್ಲಿ ಓರ್ವ ಯುವಕ ನೀರು ಪಾಲಾದರೆ ಇನ್ನುಳಿದ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅದರಲ್ಲಿ ಓರ್ವ ಬಾಲಕ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಯಾವುದೇ ಅಪಾಯವಿಲ್ಲ ಎಂದು ಹೇಳಲಾಗುತ್ತಿದೆ.

ತಲೆಮೊಗರು ನಿವಾಸಿ ರುಕ್ಮಯ ಅವರ ಮಗ ಅಶ್ವಿಥ್ (19) ನೀರು ಪಾಲಾದ ಯುವಕ.

ಹರ್ಷಿತ್ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದಂತೆ ಸ್ನೇಹಿತ ರಾದ ಲಿಖಿತ್, ವಿಕೇಶ್, ವಿಶಾಲ್ ಅವರನ್ನು ರಕ್ಷಣೆ ಮಾಡಲಾಗಿದೆ‌.

ಸ್ನೇಹಿತರಾದ ಐವರು ಸಂಜೆ 4 ಗಂಟೆ ವೇಳೆಗೆ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಮಿತಿಮೀರಿ ಹರಿಯುತ್ತಿದ್ದು ಅಪಾಯಕಾರಿ ಎಂದು ಗೊತ್ತಿದ್ದು, ಮಕ್ಕಳು ಈ ರೀತಿಯಲ್ಲಿ ನದಿಗೆ ಇಳಿಯುವುದರ ಬಗ್ಗೆ ಮನೆಯವರು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ನೀರು ಪಾಲಾದ ಅಶ್ವಿಥ್ ನ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರ ಸಹಾಯ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಮೂಲಕ ಹುಡುಕಾಟ ನಡೆಸಿದ್ದಾರೆ.

- Advertisement -

Related news

error: Content is protected !!