Sunday, May 19, 2024
spot_imgspot_img
spot_imgspot_img

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣ; ವಿಟ್ಲ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ; ಮೂವರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಬಂಟ್ವಾಳ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜುಲೈ 17ರಂದು ಬ್ಯಾಂಕಿನ ಮಹಡಿಯ ಹಂಚನ್ನು ತೆಗೆದು ಒಳನುಗ್ಗಿ ಕಳ್ಳತನ ಮಾಡುವ ಉದ್ದೇಶದಿಂದ ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿ ಕಳವಿಗೆ ಯತ್ನಿಸಿದ್ದು, ಈ ಬಗ್ಗೆ ಬ್ಯಾಂಕಿನ ವ್ಯವಸ್ಥಪಕರಾದ ಶೇಖರ ಪೂಜಾರಿ ಕೆ ರವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳಾದ ಸಕಲೇಶಪುರದ ಆನೆ ಮಹಲ್ ನಿವಾಸಿ ಪ್ರಸ್ತುತ ಹುಣಸೆಕಟ್ಟೆ, ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂಥ ಗ್ರಾಮದಲ್ಲಿ ವಾಸವಾಗಿರುವ ಅಲ್ತಾಫ್ ಹುಸೈನ್, ಸಕಲೇಶಪುರದ ಆನೆ ಮಹಲ್ ನಿವಾಸಿ ಮೊಹಮ್ಮದ್ ಆಶೀದ್, ಸಕಲೇಶಪುರದ ಆನೆ ಮಹಲ್ ನಿವಾಸಿ ಮಾರುತಿ ಯನ್ನು ಇಂದು ದಸ್ತಗಿರಿ ಮಾಡಲಾಗಿದೆ.

ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರ, ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧಿಕ್ಷಕರ ಮಾರ್ಗದರ್ಶನದಲ್ಲಿ ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕರಾದ ನಾಗಾರಾಜ ಹೆಚ್.ಇ. ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಪ್ರೊಬೇಷನರಿ ಪಿಎಸ್‌ಐ ಮಂಜುನಾಥ ಟಿ. ಸಿಬ್ಬಂದಿಗಳಾದ ಜಯರಾಮ ಕೆ.ಟಿ. , ಪ್ರಸನ್ನ ಕುಮಾರ್, ಪ್ರತಾಪ್ ರೆಡ್ಡಿ, ಹೇಮರಾಜ್, ವಿನಾಯಕರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದಾರೆ.

- Advertisement -

Related news

error: Content is protected !!