Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಪೈಂಟಿಂಗ್‌ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು..!!

- Advertisement -G L Acharya panikkar
- Advertisement -

ಬಂಟ್ವಾಳ: ಪೈಟಿಂಗ್‌ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ.

ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ರಾಬರ್ಟ್ ವೇಗಸ್ ಮೃತಪಟ್ಟ ವ್ಯಕ್ತಿ.

ಪೈಟಿಂಗ್ ಗುತ್ತಿಗೆದಾರನ ಜೊತೆ ರಾಬರ್ಟ್‌ ವೇಗಸ್ ಅವರು ಪೈಟಿಂಗ್ ಕೆಲಸಕ್ಕೆ ಇದ್ದು, ಸೋರ್ನಾಡು ಎಂಬಲ್ಲಿ ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಇವರನ್ನು ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ರಾಬರ್ಟ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!