Tuesday, May 21, 2024
spot_imgspot_img
spot_imgspot_img

ಬಂಟ್ವಾಳ: ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ..! ಕೊಲ್ಲಿ ರಾಷ್ಟ್ರಗಳಿಂದ ಕರೆ; ದೂರು ದಾಖಲು

- Advertisement -G L Acharya panikkar
- Advertisement -

ಬಂಟ್ವಾಳ: ಬಿಜೆಪಿ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಸ್ ಬೋರ್ಡ್ ಸದಸ್ಯ ಖಾಲಿದ್ ನಂದಾವರ ರವರು ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ಅವರಿಗೆ ದೂರು ನೀಡಿದ್ದಾರೆ.

ಬಂಟ್ವಾಳದಲ್ಲಿ ನಡೆಯುತ್ತಿರುವ ಅಕ್ರಮ ಕಟ್ಟಡ, ಮರಳುಗಾರಿಕೆ ಸೇರಿ ಹಲವು ಅಕ್ರಮಗಳ ವಿರುದ್ಧ ಆಯಾ ಇಲಾಖೆಗೆ ಲಿಖಿತ ದೂರು ನೀಡುತ್ತಿದ್ದಾರೆ. ಈ ಬಗ್ಗೆ ಅವರಿಗೆ ಕೊಲ್ಲಿ ರಾಷ್ಟ್ರಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿದೆ. ಇದರ ಕುರಿತು ಈ ಹಿಂದೆ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು.

ಇನ್ನು ಆಗಸ್ಟ್ 18 ರಂದು ಖಾಲಿದ್ ಅವರ ಸ್ನೇಹಿತರೊಬ್ಬರು ಕರೆ ಮಾಡಿ, ‘ನೀವು ಸ್ವಲ್ಪ ದಿನ ಹುಷಾರಾಗಿರಿ, ನಿಮ್ಮ ಮೇಲೆ ದಾಳಿ ನಡೆಸುವ ಸಂಭವ ಇದೆ’ ಎಂದು ಎಚ್ಚರಿಕೆ ನೀಡಿದ್ದು, ಈ ಹಿನ್ನಲೆ ಖಾಲಿದ್ ಅವರು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!