Friday, September 18, 2026
spot_imgspot_img
spot_imgspot_img

ಬಂಟ್ವಾಳ: ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ; ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ

- Advertisement -
- Advertisement -

ಬಂಟ್ವಾಳ: ತಾಲೂಕು ಬರಿಮಾರು ಗ್ರಾಮದ ಕೃಷಿಕ ಕುಟುಂಬದ ಮಹಿಳೆಯೋರ್ವರಿಗೆ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಫೋನ್ ಮುಖಾಂತರ ಕೊಲೆ ಬೆದರಿಕೆ ಒಡ್ಡಿದ ಆರೋಪಿ ವಲ್ಲಿ ಯಾನೆ ವಾಲ್ಟರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಮಹಿಳೆಗೆ ಪೋನಿನಲ್ಲಿ ಅವ್ಯಾಚ್ಯ ಶಬ್ದಗಳಿಂದ ಬೈದು, ಅಶ್ಲೀಲ ವಾಗಿ ನಿಂದಿಸಿದ್ದು, ಈ ಬಗ್ಗೆ ಪೋಲೀಸ್ ಠಾಣೆಗೆ ಹಾಗು ದ.ಕ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಗಳಿಗೆ ದೂರು ನೀಡಿದ್ದರೂ ಆರೋಪಿತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಬಳಿಕ ಮಹಿಳೆ ನ್ಯಾಯಾಲಯದ ಮುಂದೆ ಸಲ್ಲಿಸಿರುತ್ತಾರೆ. ನ್ಯಾಯಾಲಯವು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಆದೇಶಿಸಿದೆ.

ಇದರಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಬರಿಮಾರು ಗ್ರಾಮದ ಬಲ್ಯ ನಿವಾಸಿ ವಳ್ಳಿ ಯಾನೆ ವಾಲ್ಟರ್ವಿರುದ್ಧ ಕಲಂ 504,506,507,509 ರಂತೆ ಪ್ರಕರಣದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆನಡೆಸುತ್ತಿದ್ದಾರೆ.

- Advertisement -

Related news

error: Content is protected !!