Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಖ್ಯಾತ ಸ್ವಾಮೀಜಿ ಎಂಬ ಹೆಸರಿನಲ್ಲಿ ಯುಟ್ಯೂಬ್ ಚಾನೆಲ್ ನಲ್ಲಿ ಸುದ್ದಿ ಪ್ರಸಾರ; ಯುವತಿಯ ಫೋಟೋ ದುರುಪಯೋಗ: ಪ್ರಕರಣ ದಾಖಲು..!

- Advertisement -G L Acharya panikkar
- Advertisement -
suvarna gold

ಬಂಟ್ವಾಳ: ಮೂರು ದಿನಗಳ ಹಿಂದೆ ಯೂಟ್ಯೂಬ್ ಚಾನಲ್ ವೊಂದರಲ್ಲಿ ಬ್ರೇಕಿಂಗ್ ನ್ಯೂಸ್ ಹೆಸರಿನಲ್ಲಿ ಪೂಜೆಯ ಹೆಸರಿನಲ್ಲಿ ಇಡೀ ರಾತ್ರಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಖ್ಯಾತ ಸ್ವಾಮೀಜಿ ಎಂಬ ಹೆಸರಿನಲ್ಲಿ ಸುದ್ದಿಯೊಂದನ್ನು ಪ್ರಸಾರ ಮಾಡಿದ್ದು, ಈ ಕುರಿತಂತೆ ವ್ಯಕ್ತಿಯೋರ್ವರು ನೀಡಿದ ದೂರಿನಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಯೂಟೂಬ್ ಚಾನೆಲ್’ನ ಶಿವಮೊಗ್ಗ ಮೂಲದ ದಂಪತಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

vtv vitla
vtv vitla

ಯೂಟ್ಯೂಬ್ ಚಾನಲ್ ವೊಂದರಲ್ಲಿ ನಕಲಿ ಬಾಬಾ ಎಂಬ ಸ್ವಾಮೀಜಿ ಚಿಕಿತ್ಸೆ ಹೆಸರಿನಲ್ಲಿ ಅತ್ಯಾಚಾರ ನಡೆಸಿರುತ್ತಾನೆ ಎಂಬಂತೆ ವರದಿಯನ್ನು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್ ಹಾಗೂ ಪೇಸ್ ಬುಕ್ ಗಳಲ್ಲಿ ಪ್ರಕಟಿಸಿದ್ದು, ವಿಡಿಯೋಗಳಲ್ಲಿ ಯುವತಿಯೋರ್ವರು ಪೂಜೆ ಕೆಲಸವನ್ನು ಮಾಡುವ ಭಾವಚಿತ್ರಗಳನ್ನು ಪ್ರಕಟಿಸಿದ್ದು, ಈ ರೀತಿಯಾಗಿ ವಿಡಿಯೋಗಳನ್ನು ಪ್ರಕಟಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಆ ವಿಡಿಯೋದಲ್ಲಿ ತೋರಿಸಲಾದ ಯುವತಿಯ ತಂದೆ ದೂರು ನೀಡಿದ್ದು, ಯುವತಿಯ ಫೋಟೋಗಳನ್ನು ದುರುಪಯೋಗ ಮಾಡಿಕೊಂಡು ಈ ವಿಡಿಯೋಗಳನ್ನು ಸೃಷ್ಟಿಸಿದ್ದಾರೆ ಅಷ್ಟೇ ಅಲ್ಲದೇ ಮಾನಹಾನಿ ಉಂಟು ಮಾಡುತ್ತಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ. 09/2022 ಕಲಂ 509 ಐಪಿಸಿ ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಟೋ ದುರುಪಯೋಗ ಮಾಡಿದ್ದ ಯೂಟ್ಯೂಬ್ ಚಾನೆಲ್ ಮಾಲೀಕರನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!