

ಬಂಟ್ವಾಳ: ಯುವಕನೋರ್ವ ರೇಬಿಸ್ ಜ್ವರದಿಂದ ಒದ್ದಾಡಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಅಶೋಕ ಹೆಗ್ಡೆ ಎಂಬವರ ಪುತ್ರ ಪ್ರಶಾಂತ ಹೆಗ್ಡೆ (31) ಮೃತಪಟ್ಟ ವ್ಯಕ್ತಿ.
ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ತನ್ನ ಮನೆಯ ನಾಯಿ ಕಚ್ಚಿದ್ದು, ಆದರೆ ಪ್ರಶಾಂತ್ ನಾಯಿ ಕಚ್ಚಿರುವುದಕ್ಕೆ ಯಾವುದೇ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ.
ಬಳಿಕ ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ತೆರಳಿದ್ದಾರೆ. ಜ್ವರ ತಪಾಸಣೆ ನಡೆಸಿದ ಸಂದರ್ಭ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೆ ಪ್ರಶಾಂತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಕ್ಲಿನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾದ ಮಾಹಿತಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರು ತಿಳಿಸಿದರು.