Thursday, July 23, 2026
spot_imgspot_img
spot_imgspot_img

ಬಂಟ್ವಾಳ: ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸಾವು!

- Advertisement -
- Advertisement -

ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್’ನಲ್ಲಿ ನಿನ್ನೆ ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಗಣೇಶ್ ಎನ್ನಲಾಗಿದೆ.

ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್’ನಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಬಿಸಿರೋಡ್’ ಕಡೆಯಿಂದ ಬಂದ ಬೈಕ್ ಸವಾರ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ಒಡೆದು ಹೋಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!