- Advertisement -
- Advertisement -
ಬಂಟ್ವಾಳ: ಎಲ್.ಕೆ.ಜಿ. ಬಾಲಕನೋರ್ವನ ಮೇಲೆ ಕಾರು ಹರಿದು ಬಾಲಕ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಇಲ್ಲಿನ ಮಹಮ್ಮದಲಿ ಸಖಾಫಿ ಎಂವರ ಪುತ್ರ ಆದಿಲ್(4) ಮೃತಪಟ್ಟ ಬಾಲಕನಾಗಿದ್ದಾನೆ.
ಆದಿಲ್, ದಾರುಲ್ ಅಶ್ ಅರಿಯ ಆಂಗ್ಲ ಮಾದ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿಯಾಗಿದ್ದ. ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಾರುತಿ ಕಾರೊಂದು ಬಾಲಕನ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ಮೃತದೇಹ ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -








