Thursday, May 16, 2024
spot_imgspot_img
spot_imgspot_img

ಬಂಟ್ವಾಳ: 2016ರ ಅಪಘಾತ ಪ್ರಕರಣ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -G L Acharya panikkar
- Advertisement -
vtv vitla

ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್‌.ಐ.ಮೂರ್ತಿ ಅವರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2016 ರಲ್ಲಿ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಕಾಸರಗೋಡು ಜಿಲ್ಲೆಯ ಮುಳಿಯಾರು, ನೆಲ್ಲಿಕಾರು ನಿವಾಸಿ ನಜಾರ್ ಎನ್.ಎ. ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಬಳಿಕ ಲಾರಿ ಚಾಲಕ ಕಳೆದ ಐದು ವರ್ಷಗಳಿಂದ ವಿದೇಶದಲ್ಲಿದ್ದು, ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಈ ಕಾರಣಕ್ಕಾಗಿ ನ್ಯಾಯಾಲಯ ಈತನ ಮೇಲೆ ದಸ್ತಗಿರಿ ವಾರೆಂಟ್ ಜಾರಿ ಮಾಡಿತ್ತು. ಆದರೆ ಈತ ವಿದೇಶದಿಂದ ಬಂದಿದ್ದು, ಡಿ.5 ರಂದು ಬಿಸಿರೋಡು ಕಡೆಗೆ ಬರುತ್ತಿದ್ದ ಬಗ್ಗೆ ಎಸ್.ಐ.ಮೂರ್ತಿ ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಗುರುವಾರ ಬಿಸಿರೋಡಿನ ಬಸ್ ನಿಲ್ದಾಣದ ಬಳಿ ಬರುತ್ತಿದ್ದಂತೆ ಈತನನ್ನು ವಶಕ್ಕೆ ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎ.ಎಸ್.ಐ.ಜನಾರ್ದನ, ಹಾಗೂ ಹೆಚ್‌. ಸಿ.ದೇವದಾಸ್ ಆರೋಪಿ ಬಂಧನಕ್ಕೆ ಸಹಕರಿಸಿದ್ದರು.

- Advertisement -

Related news

error: Content is protected !!