Friday, June 5, 2026
spot_imgspot_img
spot_imgspot_img

ಬಜರಂಗದಳದ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ; ನಾಳೆ ಬಂದ್‌ಗೆ ಕರೆ..!

- Advertisement -
- Advertisement -
vtv vitla

ಶಿವಮೊಗ್ಗ : ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಅವರ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಿ.ಹೆಚ್, ರಸ್ತೆಯ ಬಸ್ ನಿಲ್ದಾಣ ಸಮೀಪ ನಡೆದಿದೆ.

ಸಮೀರ್ ಎನ್ನುವ ಯುವಕ ಈ ಹಲ್ಲೆ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾಲಾಗಿದ್ದಾರೆ.

ಘಟನೆಯನ್ನು ಖಂಡಿಸಿ ಸಾಗರ ಟೌನ್ ಪೊಲೀಸ್ ಠಾಣೆಯ ಮುಂಭಾಗ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದು, ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ, ಹಾಗೂ ಹಲ್ಲೆಗೆ ಯತ್ನ ಖಂಡಿಸಿ ನಾಳೆ ಸಾಗರ ಟೌನ್ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿದೆ.

ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್ ಭಾಗಿಯಾಗಿದ್ದರು, ಯಾತ್ರೆ ಹೋಗುವ ವೇಳೆ ಸುನೀಲ್ ಅವರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಮೀರ್, ಅದೇ ನೆಪವನ್ನಿಟ್ಟುಕೊಂಡು ಸುನೀಲ್ ಮೇಲೆ ಹಲ್ಲೆಯತ್ನಿಸಿ, ಬಳಿಕ ಸಮೀರ್ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಘಟನೆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಸಾಗರ ಪೊಲೀಸ್ ಠಾಣೆಯಲ್ಲಿ ಸುನೀಲ್ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!