Tuesday, June 9, 2026
spot_imgspot_img
spot_imgspot_img

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ; ಕುಳಿತಲ್ಲೇ ಸಾವು

- Advertisement -
- Advertisement -

ಬೆಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್‌ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕೇರಳದಿಂದ ಕಾರ್ಯ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅಬ್ದುಲ್ ಖಾದಿರ್(61 ವ) ಅವರಿಗೆ ಬಸ್ ನಲ್ಲಿಯೇ ಹೃದಯಾಘಾತ ಸಂಭವಿಸಿದೆ.

ಅಬ್ದುಲ್ ಖಾದಿರ್ ಅವರು ಯಶವಂತಪುರ ರೈಲ್ವೇ ನಿಲ್ದಾಣದಿಂದ ಮೆಜೆಸ್ಟಿಕ್‌ಗೆ ತೆರಳಲು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ರು. ಬಸ್ಸು ಮಂತ್ರಿ ಮಾಲ್ ಬಳಿ ತೆರಳುತ್ತಿದ್ದ ವೇಳೆ ಅಬ್ದುಲ್ ಖಾದಿರ್ ಅವರು ಇದ್ದಕ್ಕಿದ್ದಂತೆ ತಾವು ಕುಳಿತಿದ್ದ ಸೀಟ್ ಮೇಲೆಯೇ ಕುಸಿದು ಬಿದ್ದಿದ್ದಾರೆ. ಅವರಿಗೆ ತೀವ್ರ ಹೃದಯಾಘಾತವಾಗಿದ್ದು , ಬಸ್ಸ್‌ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.

- Advertisement -

Related news

error: Content is protected !!