Sunday, May 5, 2024
spot_imgspot_img
spot_imgspot_img

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ; ಪೋಷಕರಿಗಾಗಿ ಹುಡುಕಾಟ

- Advertisement -G L Acharya panikkar
- Advertisement -

ಚಾಮರಾಜನಗರ: ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ಬ್ಯಾಗ್ ನಲ್ಲಿ ಬಿಟ್ಟು ಹೋಗಿರುವ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನ ಪ್ರೈವೇಟ್ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಹನೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್ ವೊಂದರಲ್ಲಿ ತಮಗೆ ಬೇಡವಾದ ಮಗುವನ್ನು ಇಟ್ಟು ಹೋಗಿದ್ದಾರೆ. ಯಾರೂ ಇಲ್ಲದ ಜಾಗದಲ್ಲಿ ಮಗು ಅಳುತ್ತಿದ್ದ ಶಬ್ದ ಕೇಳಿ ಬ್ಯಾಗ್ ಬಳಿ ಬಂದು ನೋಡಿದ ಸಾರ್ವಜನಿಕರಿಗೆ ನವಜಾತ ಗಂಡು ಮಗು ಪತ್ತೆಯಾಗಿದೆ. ಬ್ಯಾಗ್ ನಲ್ಲಿದ್ದ ಮಗು ಕೇವಲ ಏಳು ದಿನಗಳ ಹಿಂದೆಯಷ್ಟೇ ಜನಿಸಿರಬಹುದು ಎಂದು ಹೇಳಲಾಗುತ್ತಿದೆ.

ಬ್ಯಾಗ್ ನಲ್ಲಿ ಮಗು ಪತ್ತೆಯಾದ ಘಟನೆ ಬಗ್ಗೆ ಸಾರ್ವಜನಿಕರು ಹನೂರು ಪೊಲೀಸರಿಗೆ ದೂರು ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಗುವನ್ನು ವಶಕ್ಕೆ ಪಡೆದು ಮಗುವಿನ ಪೋಷಕರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಆರಂಭಿಸಿರುವ ಪೊಲೀಸರು ಅಕ್ಕ ಪಕ್ಕದ ಸಿಸಿಟಿವಿ ಕ್ಯಾಮರಾ ಪುಟೇಜ್ ಗಳನ್ನು ಪರಿಶೀಲಿಸುತ್ತಿದ್ದು ನವಜಾತ ಶಿಶುವನ್ನು ಬಿಟ್ಟು ಹೋದವರಿಗಾಗಿ ಹುಡುಕುತ್ತಿದ್ದಾರೆ.

vtv vitla
vtv vitla
- Advertisement -

Related news

error: Content is protected !!