Saturday, August 8, 2026
spot_imgspot_img
spot_imgspot_img

ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ

- Advertisement -
- Advertisement -

ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು.

ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ.

ಮೀನಾ ಅವರು ಬಾಲ ಕಲಾವಿದೆಯಾಗಿ ಚಲನಚಿತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದು, 90 ರ ದಶಕದಲ್ಲಿ ಮತ್ತು 2000 ರ ದಶಕದ ಉತ್ತರಾರ್ಧದಲ್ಲಿ ಪ್ರಮುಖ ಅತಿ ಹೆಚ್ಚು ಬೇಡಿಕೆ ಇರುವ ನಟಿಯರಲ್ಲಿ ಒಬ್ಬರಾಗಿದ್ದರು. ಅವರು ದಕ್ಷಿಣ ಭಾರತದ ಎಲ್ಲಾ ಸೂಪರ್‌ಸ್ಟಾರ್‌ಗಳೊಂದಿಗೆ ನಟಿಸಿದ್ದಾರೆ. ತಾಯಿಯ ಹಾದಿಯನ್ನು ಅನುಸರಿಸುತ್ತಿರುವ ನೈನಿಕಾ ‘ತೇರಿ’ ಚಿತ್ರದಲ್ಲಿ ಬಾಲನಟಿಯಾಗಿ ತೆರೆಯ ಮೇಲೆ ಪಾದಾರ್ಪಣೆ ಮಾಡಿದ್ದಾರೆ.

ವಿದ್ಯಾ ಸಾಗರ್ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು. ಇತ್ತೀಚೆಗೆ ಮಲಯಾಳಂ ಸೂಪರ್ ಹಿಟ್ ಚಿತ್ರ ದೃಶ್ಯಂ 1 ಮತ್ತು 2 ರಲ್ಲಿ ನಟಿಸಿದ್ದರು. ಚಿತ್ರರಂಗದ ಸದಸ್ಯರು ಮತ್ತು ಮೀನಾ ಅಭಿಮಾನಿಗಳಿಂದ ಸಂತಾಪಗಳ ಮಹಾಪೂರವೇ ಹರಿದು ಬರುತ್ತಿದೆ.

- Advertisement -

Related news

error: Content is protected !!