Thursday, April 25, 2024
spot_imgspot_img
spot_imgspot_img

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ; ಮಾಲಕನಿಗೆ ಗೊತ್ತಿಲ್ಲದಿದ್ದರೆ ಪ್ರಕರಣ ದಾಖಲಿಸುವಂತಿಲ್ಲ – ಹೈಕೋರ್ಟ್ ತೀರ್ಪು

- Advertisement -G L Acharya panikkar
- Advertisement -

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮನೆ ಮಾಲಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಸಂಬಂಧ ಚಂದ್ರಲೇಔಟ್ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್‌ಐಆರ್‍ ರದ್ದು ಪಡಿಸುವಂತೆ ಕೋರಿ ನಾಗರಬಾವಿ ನಿವಾಸಿ ಪ್ರಭುರಾವ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಹೀಗಾಗಿ ಅರ್ಜಿದಾರರ ವಿರುದ್ಧದ ಎಫ್‌ಐಆರ್‍ ರದ್ದುಪಡಿಸಲಾಗಿದೆ. ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ ಪ್ರಕಾರ ೩(೨) ಬಿ ಪ್ರಕಾರ ಯಾವುದೇ ಜಾಗದಲ್ಲಿ ಏನು ನಡೆಯುತ್ತಿದೆ ಎನ್ನುವುದು ಅದರ ಮಾಲೀಕನಿಗೆ ಗೊತ್ತಿದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

- Advertisement -

Related news

error: Content is protected !!