Monday, April 29, 2024
spot_imgspot_img
spot_imgspot_img

ಬಿಗ್‌ಬಾಸ್‌ ಖ್ಯಾತಿಯ ಮಂಜು ಪಾವಗಡ ಸಹೋದರನಿಂದ ಬ್ಲಾಕ್‌ಮೇಲ್‌; ಜನರಿಂದ ಧರ್ಮದೇಟು

- Advertisement -G L Acharya panikkar
- Advertisement -

ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪ್ರದೀಪ್​ ಪಾವಗಡ ತಾನೊಬ್ಬ ಸತ್ಯ ವಿಸ್ಮಯ ವಾರ ಪತ್ರಿಕೆ ಸಂಪಾದಕ ಎಂದು ಹೇಳಿಕೊಂಡಿದ್ದ ಮತ್ತು ತುಮಕೂರು ಮಹಾನಗರ ಪಾಲಿಕೆ ನಲ್ಮ್ ವಿಭಾಗದ ಸಿಬ್ಬಂದಿ ದೀಪಿಕಾಗೆ ಪರಿಚಯವಾಗಿದ್ದ. ಸಂಘ, ಸಂಸ್ಥೆ ಹೆಸರಲ್ಲಿ 10 ಲಕ್ಷ ಸಾಲ ಪಡೆಯುವ ಸೋಗಿನಲ್ಲಿ ಪಾಲಿಕೆ ಸಿಬ್ಬಂದಿಗೆ ಪರಿಚಯವಾಗಿದ್ದ. ಈ ವೇಳೆ 10 ಲಕ್ಷ ರೂ. ಸಾಲ ಕೊಡಿಸುವುದಾಗಿ ದೀಪಿಕಾ ಅವರು ಒಪ್ಪಿಕೊಂಡಿದ್ದರು. 10 ಲಕ್ಷ ರೂ. ಸಾಲ‌ ಕೊಡಿಸಲು 4 ಲಕ್ಷ ಕಮಿಷನ್ ಹಣ ಕೊಡಬೇಕೇಂದು ದೀಪಿಕಾ, ಪ್ರದೀಪ್ ಪಾವಗಡಗೆ ಬೇಡಿಕೆ ಇಟ್ಟಿದ್ದರು. ಇದನ್ನೆ ಬಂಡವಾಳ ಮಾಡಿಕೊಂಡ ಪ್ರದೀಪ್, ದೀಪಿಕಾ ಮೊಬೈಲ್​​ನಲ್ಲಿ ಮಾತನಾಡಿದ್ದ ಆಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದ. ಇದೇ ಆಡಿಯೋ ಇಟ್ಟುಕೊಂಡು ಪಾಲಿಕೆ ಸಿಬ್ಬಂದಿ ದೀಪಿಕಾಗೆ 4 ಲಕ್ಷ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದ.

ತನ್ನ ಬಳಿಯಿದ್ದ ಮೂವರು ಯುವತಿಯರನ್ನು ಬಿಟ್ಟು, ನಾವು ಆರ್​ಟಿಐ ಕಾರ್ಯಕರ್ತರು ನೀವು ಹಣ ಕೊಟ್ಟಿಲ್ಲ ಅಂದ್ರೆ, ನಿಮ್ಮನ್ನ ಕೆಲಸದಿಂದ ವಜಾಗೊಳಿಸುವಂತೆ ಮಾಡುತ್ತೇವೆ ಎಂದು 4 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಹಣ ಕೊಡಲಿಲ್ಲ ಅಂದ್ರೆ ತನ್ನ ಪತ್ರಿಕೆಯಲ್ಲಿ ಸುದ್ದಿ ಬಿತ್ತರಿಸೋದಾಗಿ ಬೆದರಿಕೆ ಹಾಕಿದ್ದರು. ಅಲ್ಲದೇ ತನ್ನ ಜೊತೆ ಒಂದು ರಾತ್ರಿ ಕಳೆಯುವಂತೆ ಆ ಸಿಬ್ಬಂದಿಗೆ ಬೆದರಿಕೆ ಇಟ್ಟಿರುವ ಆರೋಪ ಪ್ರದೀಪ್​ ಪಾವಗಡ ವಿರುದ್ಧ ಕೇಳಿಬಂದಿದೆ. ಯಾವಾಗ ಹಣ ಕೊಡಲ್ಲ ಅಂತ ಸಿಬ್ಬಂದಿ ಪಟ್ಟು ಹಿಡಿದಾಗ‌, ಪಾಲಿಕೆ ಕಚೇರಿಯ ಕೊಠಡಿಯಲ್ಲಿ ದೀಪಿಕಾರನ್ನು ಕೂಡಿ ಹಾಕಿ ಹಣ ಕೊಡುವಂತೆ ಬ್ಲಾಕ್ ಮೇಲ್‌ ಮಾಡಿದ್ದಾರೆ ಎನ್ನಲಾಗಿದೆ. ಕೂಡಲೇ ಪಾಲಿಕೆ ಸಿಬ್ಬಂದಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಹಣ ವಸೂಲಿಗೆ ಬಂದಿದ್ದ ಪ್ರದೀಪ್ ಪಾವಗಡ ಹಾಗೂ ಆತನ ಜೊತೆಯಿದ್ದ ಮೂವರು ಯುವತಿಯರಿಗೆ ಪಾಲಿಕೆಯ ಮಧ್ಯವರ್ತಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಚಪ್ಪಲಿಯಿಂದ ಮಂಜು ಪಾವಗಡ ಸಹೋದರನಿಗೆ ಪಾಲಿಕೆ ಮಧ್ಯವರ್ತಿಗಳು ಥಳಿಸಿದ್ದಾರೆ. ಕೂಡಲೇ ತುಮಕೂರು ನಗರ ಠಾಣೆ ಪೊಲೀಸರಿಗೆ ನಾಲ್ವರನ್ನು ಒಪ್ಪಿಸಿದ್ದಾರೆ. ಸದ್ಯ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!