Monday, May 6, 2024
spot_imgspot_img
spot_imgspot_img

ಬಿಗ್ ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ ರಾಕೇಶ್ ಜುಂಜುನ್ ವಾಲಾ ನಿಧನ; ಪ್ರಧಾನಿ ಮೋದಿ ಸಂತಾಪ

- Advertisement -G L Acharya panikkar
- Advertisement -

ನವದೆಹಲಿ: ಭಾರತದ ವಾರೆನ್ ಬಫೆಟ್ ಎಂದು ಕೀರ್ತಿ ಗಳಿಸಿದ್ದ ಬಿಗ್ – ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ, ಆಕಾಶ ವಿಮಾನಯಾನ ಸಂಸ್ಥಾಪಕ ರಾಕೇಶ್​ ಜುಂಜುನ್ವಾಲಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 62 ವರ್ಷ ವಯಸ್ಸಾಗಿತ್ತು. ಇಂದು ಬೆಳಿಗ್ಗೆ 6:45 ಕ್ಕೆ ಹೃದಯಘಾತ ಸಂಭವಿಸಿದ್ದು, ಬಳಿಕ ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ಕರೆತರಲಾಗಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಕೇಶ್ ಜುಂಜುನ್ವಾಲಾ ಅವರ ಆಕಾಶ ಏರ್​ಲೈನ್ಸ್​ ಕಳೆದ ಆಗಸ್ಟ್ 7 ರಂದು ಚಾಲನೆ ಕಂಡಿತ್ತು. ಫೋರ್ಬ್ಸ್ ಪಟ್ಟಿಯ ಪ್ರಕಾರ, 2021 ರಲ್ಲಿ ಭಾರತದ 36ನೇ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ 438ನೇ ಶ್ರೀಮಂತ ವ್ಯಕ್ತಿಯಾಗಿದ್ದರು.

ಇನ್ನು ರಾಕೇಶ್​ ಜುಂಜುನ್ವಾಲಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!