Thursday, May 2, 2024
spot_imgspot_img
spot_imgspot_img

ಬಿಜೆಪಿ ಕೇಂದ್ರ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದ ಬಿಎಸ್ ಯಡಿಯೂರಪ್ಪ..!

- Advertisement -G L Acharya panikkar
- Advertisement -

ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಲಾಗಿದೆ. ಜೊತೆಗೆ ಪಕ್ಷದ ಸಂಸದೀಯ ಮಂಡಳಿಯಲ್ಲೂ ಸ್ಥಾನ ನೀಡಲಾಗಿದೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ದೇವೇಂದ್ರ ಫಡ್ನವಿಸ್ ಸೇರಿದಂತೆ ಇತರ 15 ಸದಸ್ಯರಿದ್ದಾರೆ.

ಪಕ್ಷದ ಸಂಸದೀಯ ಮಂಡಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸೇರಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಿಂದ ಕೈಬಿಡಲಾಗಿದೆ.

ಬಿಜೆಪಿ ಸಂಸದೀಯ ಮಂಡಳಿಗೆ ಹೊಸ ಸೇರ್ಪಡೆಯಾಗಿ ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸತ್ಯನಾರಾಯಣ್ ಜಟಿಯಾ, ಸುಧಾ ಯಾದವ್ ಅವರನ್ನು ಸೇರಿಸಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದ ಮಂಡಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇರಲಿದ್ದಾರೆ.

- Advertisement -

Related news

error: Content is protected !!