Sunday, May 5, 2024
spot_imgspot_img
spot_imgspot_img

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ, ನಿರ್ವಹಣಾ ಸಮಿತಿಗೆ ಸಂಚಾಲಕರಾಗಿ ಶೋಭಾ ಕರಂದ್ಲಾಜೆ ನೇಮಕ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ನೇಮಕವಾಗಿದ್ದರೆ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. 25 ಜನರ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತು ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ.

ಇನ್ನು ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ನಾಯಕರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್​​ಗೆ ಸ್ಥಾನ ನೀಡಲಾಗಿದೆ.

- Advertisement -

Related news

error: Content is protected !!