Thursday, June 18, 2026
spot_imgspot_img
spot_imgspot_img

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅನಾರೋಗ್ಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ.

ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

vtv vitla
- Advertisement -

Related news

error: Content is protected !!