Sunday, May 5, 2024
spot_imgspot_img
spot_imgspot_img

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ ಎತ್ತಂಗಡಿ.!? ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರ ನೇಮಕ.!?

- Advertisement -G L Acharya panikkar
- Advertisement -

ಬೆಂಗಳೂರು : ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಹಾನಗಲ್ ನಲ್ಲಿ ಹಿನ್ನೆಡೆಯಾಗಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತದೆ. ವಾಸ್ತವವಾಗಿ ನಳೀನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡಿ ತೆರವಾಗಲಿರುವ ಈ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬುದರ ಬಗ್ಗೆ ಉಸ್ತುವಾರಿಯಾಗಿರುವ ಅರುಣ್ ಸಿಂಗ್ ಪಕ್ಷದ ಪ್ರಮುಖರ ಜೊತೆ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ ಎನ್ನಲಾಗುತ್ತಿತ್ತು.

ಹಾಗೆಯೇ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ.ಸಾಮಾನ್ಯವಾಗಿ ಬಿಜೆಪಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಸಂಪ್ರದಾಯವಿದೆ. ರಾಷ್ಟ್ರ ಮಟ್ಟದಲ್ಲಾಗಲಿ ಅಥವಾ ರಾಜ್ಯ ಮಟ್ಟದಲ್ಲಾಗಲಿ ಒಂದು ಬಾರಿ ಅಧ್ಯಕ್ಷರಾದರೆ ಮೂರು ವರ್ಷ ಅವರ ಸ್ಥಾನ ಅಬಾತ ಎನ್ನಲಾಗುತ್ತಿತ್ತು.

ಪ್ರತಿಯೊಂದನ್ನು ದೆಹಲಿಯಲ್ಲಿರುವ ಕರ್ನಾಟಕವನ್ನು ಪ್ರತಿನಿಸುವ ಪ್ರಭಾವಿ ನಾಯಕರ ಕಣ್ಣಸನ್ನೆಯಂತೆ ಕೆಲಸ ಮಾಡುತ್ತಿದ್ದಾರೆ. ಕೆಳಹಂತದ ಕಾರ್ಯಕರ್ತರನ್ನು ಗುರುತಿಸುವಲ್ಲೂ ಅವರು ವಿಫಲರಾಗಿದ್ದಾರೆ ಎಂಬ ಆರೋಪವಿದೆ. ಆದರೆ ನಳಿಕುಮಾರ್ ಕಟೀಲ್ ಅಧ್ಯಕ್ಷರಾದ ನಂತರ ಸ್ವತಂತ್ರವಾಗಿ ಯಾವುದೇ ಪ್ರಮುಖ ತೀರ್ಮಾನವನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಬಿಜೆಪಿಯಲ್ಲಿ ನಳೀನ್ ಕುಮಾರ್ ಕಟೀಲ್ ಪ್ರತಿಯೊಂದಕ್ಕೂ ದೆಹಲಿಯಲ್ಲಿ ಕುಳಿತಿರುವ ನಾಯಕರನ್ನೇ ಅವಲಂಬಿಸುತ್ತಾರೆ. ಪದಾಕಾರಿಗಳ ನೇಮಕಾತಿ, ಯಾವುದೇ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಪ್ರಚಾರ, ಕಾರ್ಯತಂತ್ರ ರೂಪಿಸುವುದರಲ್ಲೂ ವಿಫಲರಾಗಿದ್ದಾರೆ. ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸುವುದು ಕೂಡ ಬಿಜೆಪಿಗೆ ನುಂಗಲಾರದ ತುತ್ತಾಗಿದೆ ಎಂದು ತಿಳಿದು ಬಂದಿದೆ. ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಡ್ರಗ್ ಸೇವಿಸುತ್ತಾರೆ ಎಂದು ಹೇಳಿದ್ದು ಭಾರೀ ವಿವಾದವನ್ನೇ ಸೃಷ್ಟಿಸಿತ್ತು.

ನಂತರ ಬಸವ ಕಲ್ಯಾಣ, ಮಸ್ಕಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಬಿಎಸ್ ವೈ ಪ್ರಭಾವವೇ ಕೆಲಸ ಮಾಡಿತ್ತು. ಇಲ್ಲಿ ಪಕ್ಷದ ಅಧ್ಯಕ್ಷರಾಗಿರುವ ಕಟೀಲ್ ಅವರ ಕೊಡುಗೆ ಶೂನ್ಯ ಎಂದು ಪಕ್ಷದ ಕಾರ್ಯಕರ್ತರೇ ದೂರುತ್ತಾರೆ. ರಾಷ್ಟ್ರೀಯ ಪಕ್ಷವೊಂದರ ಅಧ್ಯಕ್ಷರಾಗಿರುವ ಕಟೀಲ್ ಅವರಲ್ಲಿ, ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವಲ್ಲೂ ಅನುಭವದ ಕೊರತೆ ಕಾಣುತ್ತಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ನಳೀನ್ ಕುಮಾರ್ ಕಟೀಲ್ ಒಂದು ವೇಳೆ ಅಧ್ಯಕ್ಷ ಸ್ಥಾನದಿಂದ ಇಳಿದರೆ ತೆರವಾಗಲಿರುವ ಈ ಸ್ಥಾನಕ್ಕೆ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ನೀಡುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!