Friday, May 3, 2024
spot_imgspot_img
spot_imgspot_img

ಬಿಸಿಲಿನ ಬೇಗೆಗೆ ಕಂಗೆಟ್ಟ ಜನತೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..!

- Advertisement -G L Acharya panikkar
- Advertisement -

ಬೆಂಗಳೂರು : ರಾಜ್ಯದಲ್ಲಿ ಬಿಸಿಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಲ ಬೇಗೆಯಿಂದ ಉಂಟಾಗಬಹುದಾದ ಸನ್ ಸ್ಟ್ರೋಕ್, ಹೀಟ್ ಸ್ಟ್ರೋಕ್ ನಂತಹ ಅಪಾಯಗಳಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಯ ಪ್ರಕಾರ, ನವಜಾತ ಶಿಶುಗಳು, ಪುಟ್ಟ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿರುವವರು, ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಸಾರ್ವಜನಿಕರು ಏನು ಮಾಡಬೇಕು?
ಉಷ್ಣ ಮಾರುತದಿಂದ ರಕ್ಷಿಸಿಕೊಳ್ಳಲು ಹೆಚ್ಚು ನೀರು ಕುಡಿಯಬೇಕು, ನಿಂಬೆ ಹಣ್ಣಿನ ಷರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್ ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬೇಕು, ನೀರಿನ ಅಂಶ ಹೆಚ್ಚಿರುವ ಕಲ್ಲಂಗಡಿ, ಕರಬೂಜ,ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಎಳೆನೀರು ಸೇವಿಸಬೇಕು, ತಿಳಿಬಣ್ಣದ, ಮೈಗೆ ಅಂಟದ ಹತ್ತಿಬಟ್ಟೆ ಧರಿಸಬೇಕು. ನೆರಳಿಗೆ ಟೋಪಿ, ಛತ್ರಿಗಳನ್ನು ಇಟ್ಟುಕೊಳ್ಳಬೇಕು.

ಏನು ಮಾಡಬಾರದು?
ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು, ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಕೆಗಳನ್ನು ಕೈಗೊಳ್ಳಬಾರದು, ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ, ಮಧ್ಯಾಹ್ನದ ಸಮಯದಲ್ಲಿ ಅಡುಗೆ ಮಾಡುವುದು ತಪ್ಪಿಸಿ, ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆಯಬೇಕು, ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಬೇಕು. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ. ಶ್ರಮದಾಯಕ ಹಾಗೂ ಹೊರಾಂಗಣ ಚಟುವಟಕೆಗಳ ತಾಪಮಾನವು ಕಡಿಮೆ ಇರುವ ಸಮಯದಲ್ಲಿ ಅಂದರೆ, ಬೆಳಗಿನ ಅಥವಾ ಸಂಜೆಯ ವೇಳೆ ಮಾಡಬೇಕು.

- Advertisement -

Related news

error: Content is protected !!