Saturday, June 28, 2025
spot_imgspot_img
spot_imgspot_img

ಬೆಂಗಳೂರಿನಲ್ಲಿ ಮತ್ತೊಂದು ಸ್ಪೋಟ; ರಾಸಾಯನಿಕ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟ!

- Advertisement -
- Advertisement -
driving

ಆನೇಕಲ್: ಬೆಂಗಳೂರಿನ ಕೆಮಿಕಲ್ ಕಂಪನಿ ಒಂದರಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಕಂಪನಿಯಲ್ಲಿ ನಡೆದಿದೆ.

ಕೆಮಿಕಲ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದ ಗಾಳಿಯಲ್ಲಿ ವಾಸನೆ ಉಂಟಾಗಿದೆ. ಗಾಳಿಯಲ್ಲೆಲ್ಲಾ ಕೆಮಿಕಲ್ ತುಂಬಿ ಬಟ್ಟೆಗಳಲ್ಲಿಯೂ ವಾಸನೆ ಉಂಟಾಗಿದೆ. ಈ ಕೆಮಿಕಲ್‌ ವಾಸನೆಗೆ ಹೆದರಿ ಜನರು ಫ್ಯಾಕ್ಟರಿ ಸಮೀಪಕ್ಕೆ ತೆರಳುತ್ತಿಲ್ಲ.

ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ನಿನ್ನೆ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಕೆಲವು ಮಾಹಿತಿಗಳು ಲಭ್ಯವಾಗಿತ್ತು. ಸ್ಫೋಟ ಸಂಭವಿಸಲು ರೀಲ್​ ಪಟಾಕಿಯೇ ಕಾರಣ ಎಂದು ಪ್ರಾಥಮಿಕ ವಿವರಗಳು ಲಭಿಸಿತ್ತು. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ ಬಿದ್ದು ಸ್ಫೋಟ ಆಗಿದೆ. ಎಫ್​ಎಸ್​ಎಲ್, ಬಾಂಬ್​ ನಿಷ್ಕ್ರಿಯ ತಂಡದಿಂದ ಪ್ರಾಥಮಿಕ ಮಾಹಿತಿ ಲಭ್ಯವಾಗಿತ್ತು. ರಿಂಗ್ ಕ್ಯಾಪ್ಸ್​​ ಗನ್​ಗಳಲ್ಲಿ ಪಟಾಕಿ ಹಾಕಿ ಹೊಡೆಯಲಾಗುತ್ತೆ.

ಹಿಂದೆ ಮಕ್ಕಳು ರೀಲ್ ಪಟಾಕಿಯಿಟ್ಟು ನೆಲಕ್ಕೆ ಹೊಡೀತಿದ್ದರು. ಇಲ್ಲೂ ಕೂಡ ಬಾಕ್ಸ್ ಬಿದ್ದಾಗ ಅದೇ ರೀತಿಯ ಘಟನೆ ಆಗಿದೆ. ಪಟಾಕಿ ರೀಲ್ ದೊಡ್ಡದಿದ್ದು, ನೆಲಕ್ಕೆ ಬಿದ್ದಾಗ ಸ್ಫೋಟಿಸಿದೆ ಎಂದು ಹೇಳಲಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!