Sunday, May 5, 2024
spot_imgspot_img
spot_imgspot_img

ಬೆಂಗಳೂರು: ಮಾಜಿ ಸಿಎಂ ಬಿಎಸ್ ವೈ ಗೆ ಮತ್ತೆ ಸಂಕಷ್ಟ-ಕೇಸ್ ದಾಖಲಿಸಲು ವಿಶೇಷ ನ್ಯಾಯಾಲಯ ಆದೇಶ

- Advertisement -G L Acharya panikkar
- Advertisement -

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ‘ವಿಶೇಷ ಕ್ರಿಮಿನಲ್ ಕೇಸ್’ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೂಚಿಸಿದೆ.

2006-07ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಈ ವೇಳೆ ಮಾಡಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಂಕಷ್ಟ ಎದುರಾಗಿದೆ.

vtv vitla
vtv vitla

ವಾಸುದೇವ ರೆಡ್ಡಿ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ ಕರ್ನಾಟಕದ ಚುನಾಯಿತ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದ ಸೆಷನ್ಸ್ ನ್ಯಾಯಾಧೀಶ ಬಿ ಜಯಂತ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ.

ಯಡಿಯೂರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ‘ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ’ ಎಂದು ಲೋಕಾಯುಕ್ತ ಪೊಲೀಸರು ಎರಡು ಬಾರಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು.

- Advertisement -

Related news

error: Content is protected !!