Saturday, April 27, 2024
spot_imgspot_img
spot_imgspot_img

ಬೆಡ್ ಬ್ಲಾಕಿಂಗ್ ದಂಧೆ: ಇಬ್ಬರು ವೈದ್ಯರ ಸಹಿತ 8 ಮಂದಿ ಸಿಸಿಬಿ ವಶಕ್ಕೆ!

- Advertisement -G L Acharya panikkar
- Advertisement -

ಬೆಂಗಳೂರು: ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿರುವ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಿಸಿಬಿ ತನಿಖೆಗೆ ಆದೇಶಿಸಿದ್ದು, ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಡಾಕ್ಟರ್ ಸೇರಿದಂತೆ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆಯೇ 8 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಇಬ್ಬರು ಬಿಬಿಎಂಪಿ ಡಾಕ್ಟರ್​ಗಳು, ಡೇಟಾ ಎಂಟ್ರಿ ಆಪರೇಟರ್​ಗಳು ಮತ್ತು ಅಸಿಸ್ಟೆಂಟ್​ಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಡ್ ದಂಧೆಯಲ್ಲಿ ಡಾಕ್ಟರ್ ಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗಿದೆ. ಸದ್ಯ ಇಬ್ಬರು ಡಾಕ್ಟರ್ ಸೇರಿದಂತೆ 8 ಮಂದಿಯನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಜಯನಗರ ಪೊಲೀಸರಿಂದ ನೇತ್ರಾವತಿ ಮತ್ತು ರೋಹಿತ್ ಅವರನ್ನು ಬಂಧಿಸಲಾಗಿದೆ.

3 ಬೆಡ್ ಕೊಡಿಸಿ ಹಣ ವಸೂಲಿ ಮಾಡಿದ್ದ ಇಬ್ಬರು ಆರೋಪಿಗಳು ಒಟ್ಟು 1.7 ಲಕ್ಷ ರೂ. ವಸೂಲಿ ಮಾಡಿದ್ದರು. ಎರಡು ಬೆಡ್ ಗೆ ತಲಾ 40,000 ರೂ. ಮತ್ತೊಂದು ಬೆಡ್ ಗೆ 27,000 ರೂ. ವಸೂಲಿ ಮಾಡಿದ್ದ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ.

- Advertisement -

Related news

error: Content is protected !!